ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ನೂತನ ಕೊಠಡಿಗಳ ಉದ್ಘಾಟನೆ ನಾಳೆ

Rashmi Kasaragodu
Updated On : 30 Jan 2013, 11:00 am


ಹೊಳೆಆಲೂರ: ಸ್ಥಳೀಯ ಯಚ್ಚರೇಶ್ವರ ಶಿಶುವಿಹಾರ, ಪ್ರಾಥಮಿಕ, ಪ್ರೌಢಶಾಲೆಗಳ ಹಾಗೂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಪ್ರಸ್ತುತ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ನೂತನ ಕೊಠಡಿಗಳ ಉದ್ಘಾಟನಾ ಸಮಾರಂಭ ಜ. 31 ಮತ್ತು ಫೆ. 1ರಂದು ನಡೆಯಲಿದೆ. ಜ. 31ರ ಬೆಳಗ್ಗೆ 10.30ಕ್ಕೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೂತನ ಕೊಠಡಿಗಳನ್ನು ಉದ್ಘಾಟಿಸುವರು. ಯಚ್ಚರೇಶ್ವರ ಶ್ರೀಗಳು, ಎ.ಪಿ. ಪಾಟೀಲ ಗುರೂಜಿ ಸಾನ್ನಿಧ್ಯ ವಹಿಸುವರು. ಕಾರ್ಯ ನಿರ್ವಾಹಕ ಅಭಿಯಂತರ ಪಿ. ನಾಗರಾಜಮೂರ್ತಿ ಪ್ರದರ್ಶನಗಳನ್ನು ಉದ್ಘಾಟಿಸುವರು. ಗ್ರಾಪಂ ಪ್ರಭಾರಿ ಅಧ್ಯಕ್ಷ ಜಗದೀಶ ಬ್ಯಾಡಗಿ, ಗ್ರಾಪಂ ಸದಸ್ಯ ಕಲ್ಲಪ್ಪ ಸಾಸಳ್ಳಿ ಉಪಸ್ಥಿತರಿರುವರು. ಸಂಜೆ 4 ಗಂಟೆಗೆ ಬಯಲು ರಂಗಮಂದಿರದಲ್ಲಿ 6ನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಂದ ಮನರಂಜನೆ ಕಾರ್ಯಕ್ರಮಗಳು, ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಫೆ. 1ರಂದು ಸಂಜೆ 4 ಗಂಟೆಗೆ ಬಯಲು ಮಂದಿರದಲ್ಲಿ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನವಾಗಲಿದ್ದು, ಶಿಶುವಿಹಾರ ಮತ್ತು 1ರಿಂದ 5ನೇ ತರಗತಿ ಮಕ್ಕಳಿಂದ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಸಂಸ್ಥೆ ಅಧ್ಯಕ್ಷ ಎ.ಎನ್. ಬಡಿಗೇರ ಅಧ್ಯಕ್ಷತೆ ವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement