ಹಾವೇರಿ

ಸಾಹಿತ್ಯ, ಕಲೆಗೆ ಪ್ರೋತ್ಸಾಹ ಅವಶ್ಯ






ಗಜೇಂದ್ರಗಡ: ಪ್ರಾಚೀನ ಕಾಲದಿಂದಲೂ ಹಿರಿಯರು ಹಾಕಿಕೊಟ್ಟ ಸಂಸ್ಕೃತಿ, ಕಲೆ, ಸಾಹಿತ್ಯಕ್ಕೆ ಪ್ರೋತ್ಸಾಹಿಸುವುದು ಅವಶ್ಯ ಎಂದು ಸಂಯುಕ್ತಾ ಬಂಡಿ ಹೇಳಿದರು.
ಈಚೆಗೆ ಅವರು ಪಟ್ಟಣದ ಕೆ.ಜಿ. ಬಂಡಿ ಗಾರ್ಡನ್‌ದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗುರುಶಾಂತಪ್ಪ ಬಂಡಿ ಸ್ಮರಣಾರ್ಥ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ಯುವ ಪೀಳಿಗೆ ಸಾಹಿತ್ಯಿಕ ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು. ಸಾಹಿತಿಗಳ, ನಾಟಕಕಾರರ, ಕಲಾವಿದರ ಕುರಿತು ಅಭಿಮಾನ ಹೊಂದಿರಬೇಕು. ಪುರಾತನ ಭಾರತೀಯ ಸಂಸ್ಕೃತಿ ಮರೆತು ಪಾಶ್ಚಾತ್ಯ ಸಂಸ್ಕೃತಿ ಅನುಸರಿಸಿದರೆ ವಿನಾಶ ತಪ್ಪಿದ್ದಲ್ಲ. ಇಂದಿನ ಶಿಕ್ಷಕರು ಮಕ್ಕಳಿಗೆ ಉತ್ತಮ ನಾಗರಿಕರನ್ನು ತಯಾರಿಸುವ ಶಿಕ್ಷಣ ನೀಡಬೇಕು ಎಂದರು.
ಶಿರಹಟ್ಟಿಯ ಕಸಾಪ ಅಧ್ಯಕ್ಷ ಕೆ.ಎ. ಬಳಿಗೇರ ಬಸವಣ್ಣನವರ ಸಾಮಾಜಿಕ ವಿಚಾರಧಾರೆ ವಿಷಯ ಕುರಿತು ಉಪನ್ಯಾಸ ನೀಡಿ, ಬಸವೇಶ್ವರರು ತಮ್ಮ ವಚನಗಳ ಮೂಲಕ ಹೇಳಿರುವ ವಿಚಾರಗಳನ್ನು ಇಂದಿನ ಸಮಾಜದಲ್ಲಿರುವ ಎಲ್ಲ ಸ್ತರದ ಜನರು ಅವರ ಮೌಲ್ಯಗಳನ್ನು ಅಳವಡಿಸಿಕೊಂಡು ಬದುಕುವ ಅವಶ್ಯಕತೆ ಇದೆ. ಬಸವಣ್ಣನವರು ನಾಡು ಕಂಡಂತಹ ಮಹಾನ ದಾರ್ಶನಿಕ ಎಂದು ಹೇಳಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ನೆರವೇರಿಸಿದರು.
ಗದಗ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಕುರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪುರಸಭೆ ಸ್ಥಾಯಿ ಸಮಿತಿ ಚೇರಮನ್ ಚಂದ್ರು ಚಳಗೇರಿ, ಅಮರೇಶ ಬಳಿಗೇರ, ಎಸ್.ಬಿ. ಹಿರೇಮಠ, ಗೌರವ ಕಾರ್ಯದರ್ಶಿ ಶರಣು ಗೋಗೇರಿ, ಎಂ.ಕೆ. ಗಂಗರಗೊಂಡ, ಕೆ.ಎಸ್. ಕಳಕಣ್ಣವರ, ಡಿ.ಎಸ್. ತಳವಾರ ಮುಂತಾದವರು ಉಪಸ್ಥಿತರಿದ್ದರು. ಪ್ರೊ. ಎಸ್.ವಿ. ಅಂದಾನಶೆಟ್ಟರ ಸ್ವಾಗತಿಸಿದರು. ಪ್ರೊ. ಎಸ್.ಎಸ್. ಹುರಕಡ್ಲಿ, ಎಸ್.ಎಸ್. ಹುಣಸಿಕಟ್ಟಿ ನಿರೂಪಿಸಿದರು. ಕೆ.ಎಸ್. ಕಳಕಣ್ಣವರ ವಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್