ಸಮ್ಮೇಳನದ ಪ್ರಮುಖ ನಿರ್ಣಯಗಳು
ಹೊಸರಿತ್ತಿ: ಗ್ರಾಮದಲ್ಲಿ ಜರುಗಿದ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಕೆಲ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ನಿರ್ಣಯಗಳು: 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿ ಜಿಲ್ಲೆಯಲ್ಲಿ ನಡೆಸುವಂತೆ ಆಗ್ರಹಿಸುವುದು, ಜಿಲ್ಲೆಯಲ್ಲಿನ ಎಲ್ಲ ಕೆರೆಗಳಿಗೆ ನೀರು ತುಂಬಿಸಿ ನೀರಾವರಿಗೆ ಆದ್ಯತೆ ನೀಡಬೇಕು, ಪ್ರಾಣಿ ಹಾಗೂ ಸಸ್ಯ ಜೀವ ಸಂಕುಲಗಳನ್ನು ಉಳಿಸಲು ನೆರವಾಗಬೇಕು, ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯವಾಗಿ ಕನ್ನಡದಲ್ಲಿ ನೀಡುವಂತಾಗಲು ಸರ್ಕಾರ ಕ್ರಮಕೈಗೊಳ್ಳಬೇಕು. ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಸರ್ಕಾರದ ಹುನ್ನಾರಕ್ಕೆ ಖಂಡನೆ, ಬ್ಯಾಡಗಿ ಮೆಣಸಿನಕಾಯಿ ಮೂಲ ತಳಿ ಅಭಿವೃದ್ಧಿಪಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು, ಟಾಟಾ ಮೆಟಾಲಿಕ್ ಕಂಪನಿಗೆ ಭೂಮಿ ನೀಡುವ ರೈತರನ್ನು ಪಾಲುದಾರರನ್ನಾಗಿ ಮಾಡಿಕೊಳ್ಳಬೇಕು. ಒಂದು ವೇಳೆ ಯಾವುದೇ ಕಾರಣಕ್ಕೆ ಕಾರ್ಖಾನೆ ಸ್ಥಗಿತಗೊಂಡಲ್ಲಿ ರೈತರಿಗೇ ಮರಳಿಸಬೇಕು.