ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ನಾಳೆ ಮಲೇರಿಯಾ ವಿರೋಧಿ ದಿನ

Lingaraj Badiger
Updated On : 2 Jul 2013, 11:16 am

ಹಾವೇರಿ: ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಜಿಲ್ಲಾ ವಾರ್ತಾ ಕಚೇರಿ, ಜಿಲ್ಲಾಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಹೊಸಮಠ ಎಸ್‌ಜೆಎಂ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಜಿಲ್ಲಾ ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಜು. 3ರಂದು ಬೆಳಗ್ಗೆ 11ಕ್ಕೆ ನಗರದ ಎಸ್‌ಜೆಎಂ ಕಾಲೇಜಿನಲ್ಲಿ ಜರುಗಲಿದೆ.
ಸಣ್ಣ ಕೈಗಾರಿಕೆ, ಮುಜರಾಯಿ, ಸಕ್ಕರೆ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಅವರು ಉದ್ಘಾಟನೆ ನೆರವೇರಿಸಲಿದ್ದು, ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಶಿವಕುಮಾರ ಉದಾಸಿ ಹಾಗೂ ಪ್ರಹ್ಲಾದ ಜೋಶಿ, ಶಾಸಕರಾದ ಕೆ.ಬಿ. ಕೋಳಿವಾಡ, ಮನೋಹರ ತಹಸೀಲ್ದಾರ್, ಬಸವರಾಜ ಶಿವಣ್ಣನವರ, ಬಸವರಾಜ ಬೊಮ್ಮಾಯಿ ಹಾಗೂ ಯು.ಬಿ. ಬಣಕಾರ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಸೋಮಣ್ಣ ಬೇವಿನಮರದ, ಜಿಪಂ ಅಧ್ಯಕ್ಷ ಶಂಕ್ರಣ್ಣ ಮಾತನವರ, ಉಪಾಧ್ಯಕ್ಷೆ ಗೀತಾ ಅಂಕಸಖಾನಿ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜವ್ವ ಆಡಿನ ಹಾಗೂ ತಾಪಂ ಉಪಾಧ್ಯಕ್ಷ ಬಸವರಾಜ ಕಳಸೂರ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಪಾಂಡುರಂಗ ನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನಸಿಂಗ್ ರಾಥೋರ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಕುಸುಗಲ್ಲ ಹಾಗೂ ಹೊಸಮಠ ಎಸ್‌ಜೆಎಂ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಎಸ್.ಎಸ್. ಬೇವಿನಮರದ ಭಾಗವಹಿಸುವರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ೤ ಬಸವರಾಜ ಸಜ್ಜನ ಅವರು ಉಪನ್ಯಾಸ ನೀಡುವರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ೤ ಎಚ್.ಎಸ್. ರಾಘವೇಂದ್ರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement