ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಡೆಂಘೀ ಸಾವು: ಬಾಲಕಿ ಮನೆಗೆ ಶಾಸಕ ಭೇಟಿ

Lingaraj Badiger
Updated On : 3 Jul 2013, 11:53 am

ಕನ್ನಡಪ್ರಭ ವಾರ್ತೆ, ಹಿರೇಕೆರೂರು, ಜು. 2
ಡೆಂಘೀ ಜ್ವರದಿಂದ ಬಾಲಕಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಶಾಸಕ ಯು.ಬಿ. ಬಣಕಾರ ಅವರು ಮಾಸೂರು ಗ್ರಾಮಕ್ಕೆ ಭೇಟಿ ನೀಡಿ ಮೃತ ಬಾಲಕಿಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತಂತ್ರಜ್ಞಾನದಲ್ಲಿ ಬಹಳಷ್ಟು ಮುಂದುವರಿದಿದ್ದರೂ ಕೆಲವು ರೋಗಗಳಿಂದ ಸಾವನ್ನಪ್ಪುವವರ ಬಗ್ಗೆ ಖಚಿತ ಮಾಹಿತಿ ದೊರೆಯುತ್ತಿಲ್ಲ.
ಡೆಂಘೀ ಜ್ವರದಿಂದ ಅನೇಕರು ಸಾವನ್ನಪ್ಪಿದರೂ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡದೆ 'ಶಂಕಿತ ಡೆಂಘೀ' ಎಂದು ಹೇಳುತ್ತಿದ್ದಾರೆ ಎಂದು ದೂರಿದರು. ಸಾವನ್ನಪ್ಪಿರುವ ಬಾಲಕಿ ಪಾಲಕರು ಈಗಾಗಲೇ ಸಾಕಷ್ಟು ಹಣ ಖರ್ಚು ಮಾಡಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ಗ್ರಾಪಂ ಅಧ್ಯಕ್ಷ ಚನ್ನಬಸಪ್ಪ ರಾಮಜ್ಜನವರ, ರಮೇಶ ನ್ಯಾಮತಿ, ರವಿ ಶಿದ್ದಪ್ಪಗೌಡ್ರ, ರಾಮಚಂದ್ರಪ್ಪ ಬೋಗೇರ, ರವಿ ಚಿಂದಿ, ಗುರಣ್ಣ ಗಿಡಗೂರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement