ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಭರವಸೆ: ಆಹೋರಾತ್ರಿ ಧರಣಿ ಹಿಂದಕ್ಕೆ

Lingaraj Badiger
Updated On : 3 Jul 2013, 11:54 am

ಹಾವೇರಿ: ಜಿಲ್ಲಾಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಜಿಲ್ಲಾಸ್ಪತ್ರೆ ಎದುರು ನಡೆಸಿದ ಅಹೋರಾತ್ರಿ ಧರಣಿ ಮಂಗಳವಾರ ಮುಕ್ತಾಯಗೊಂಡಿತು.
ಜಿಲ್ಲಾಸ್ಪತ್ರೆ ಅವ್ಯವಸ್ಥೆ ಆಗರವಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಸರಿಪಡಿಸಲು ಕಿಂಚಿತ್ತೂ ಪ್ರಯತ್ನಿಸುತ್ತಿಲ್ಲ ಎಂದು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಸೋಮವಾರ ಬೆಳಗ್ಗೆ ಆಸ್ಪತ್ರೆ ಎದುರು ಪ್ರತಿಭಟನೆ ಹಮ್ಮಿಕೊಂಡದ್ದರಲ್ಲದೆ, ಈ ಕುರಿತಂತೆ ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಿ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂದಕ್ಕೆ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದ್ದರು.
ಜಿಲ್ಲಾಧಿಕಾರಿ ಸೋಮವಾರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸದೇ ಇರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಅಹೋರಾತ್ರಿಯವರೆಗೂ ಮುಂದುವರೆಸಲಾಗಿತ್ತು. ಡಿಸಿ ಮಂಗಳವಾರ ಸ್ಥಳಕ್ಕೆ ಆಗಮಿಸಿ ಆಸ್ಪತ್ರೆ ಸುಧಾರಣೆಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು. ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗದ ಉಲ್ಬಣಗೊಂಡರೂ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ವಿಫಲವಾಗಿದೆ. ವೈದ್ಯರ ಕೊರತೆ. ಮೂಲಸೌಕರ್ಯಗಳ ಕೊರತೆಯಿಂದ ಕೋಟ್ಯಂತರ ರು. ವ್ಯಯಿಸಿ ಸರ್ಕಾರ ಆಸ್ಪತ್ರೆ ಕಟ್ಟಿಸಿದರೂ ಪ್ರಯೋಜನಕ್ಕೆ ಬಾರದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ್ ಬೆಂಗಳೂರು, ರಾಜ್ಯ ಉಪಾಧ್ಯಕ್ಷ ಸದಾನಂದ ಶೆಟ್ಟಿ, ಇನ್ನಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement