ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ನೈವೇದ್ಯಪೂಜಾ ಕಾರ್ಯಕ್ರಮ

Lingaraj Badiger
Updated On : 8 Jul 2013, 11:34 am

ಬ್ಯಾಡಗಿ: ತಾಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿ ಗುಬ್ಬಿ ಶ್ರೀ ನಂಜುಂಡೇಶ್ವರ ಮಹಾಸ್ವಾಮಿಗಳ 37ನೇ ಪುಣ್ಯಾರಾಧನೆ ನಿಮಿತ್ತ ಇದೇ ಸೋಮವಾರ (ಜು.8) ಮುಂಜಾನೆ 6ಕ್ಕೆ ಕತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಹಾಗೂ ಭಕ್ತಾದಿಗಳಿಂದ ನೈವೇದ್ಯಪೂಜಾ ಕಾರ್ಯಕ್ರಮ ಜರುಗಲಿದೆ. ಮುಂಜಾನೆ 10 ಗಂಟೆಗೆ ಮಹಾಶಿವಯೋಗಿಗಳವರ ಭಾವಚಿತ್ರದ ಮೆರವಣಿಗೆ ಸಕಲ ವಾದ್ಯ ವೈಭವದೊಂದಿಗೆ ಗ್ರಾಮದಲ್ಲಿ ಜರುಗಲಿದೆ. 12 ಗಂಟೆಗೆ ಧರ್ಮಸಭೆ ಜರುಗಲಿದ್ದು, ನೆಗಳೂರು ಹಿರೇಮಠದ ಗುರುಶಾಂತ ಶಿವಯೋಗಿ ಶಿವಾಚಾರ್ಯ ಮಹಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು. ಬಳಿಕ ಮಹಾಪ್ರಸಾದ ವಿನಿಯೋಗ ನಡೆಯಲಿದೆ ಎಂದು ಶ್ರೀ ಗುಬ್ಬಿ ನಂಜುಂಡೇಶ್ವರ ಟ್ರಸ್ಟ್‌ಕಮಿಟಿ ತಿಳಿಸಿದೆ.
ಪ್ರಶಸ್ತಿ: ಅರ್ಜಿ ಆಹ್ವಾನ
ಹಾವೇರಿ: ಅಸಾಧಾರಣ ಪ್ರತಿಭೆಯುಳ್ಳ 4ರಿಂದ 15 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡುವ ಯೋಜನೆ ಜಾರಿಯಲ್ಲಿದೆ. ಪ್ರಸಕ್ತ ಸಾಲಿಗೆ ಹಾವೇರಿ ಜಿಲ್ಲಾ ಮಟ್ಟದಲ್ಲಿ ಕಲೆ, ಶಿಕ್ಷಣ, ಸಂಸ್ಕೃತಿ ಹಾಗೂ ಕ್ರೀಡೆ ಹೀಗೆ ನಾಲ್ಕು ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿಶೇಷ ಪ್ರತಿಭೆ ಹೊಂದಿರುವ ಮಕ್ಕಳನ್ನು ಗುರುತಿಸಿ, ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು ಎಂಟು ಮಕ್ಕಳನ್ನು ಆಯ್ಕೆ ಮಾಡಿ ತಲಾ ರು. 10 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಚನ್ನಮ್ಮ ಹೊಳಿಹೊಸೂರ ತಿಳಿಸಿದ್ದಾರೆ. ಪ್ರಶಸ್ತಿಗೆ ಅರ್ಹವಿರುವ ಮಕ್ಕಳು ಅರ್ಜಿಯನ್ನು 15 ಜುಲೈ, 2013ರೊಳಗಾಗಿ  ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆಡಳಿತ ಭವನ ದೇವಗಿರಿ(ಹಾವೇರಿ) ಅವರ ಕಚೇರಿಗೆ ಸಲ್ಲಿಸಬೇಕು. ರಾಷ್ಟ್ರ ಪ್ರಶಸ್ತಿಗೆ ಶಿಫಾರಸು ಪಡೆದ ಮಕ್ಕಳು ರಾಷ್ಟ್ರ ಪ್ರಶಸ್ತಿಗಾಗಿ ಇಂಗ್ಲಿಷ್ ಭಾಷೆಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಅರ್ಹತೆ: 1 ಆಗಸ್ಟ್, 1998 ಹಾಗೂ ನಂತರ ಹುಟ್ಟಿದ ಮಕ್ಕಳ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ವಯೋವುತಿ ಬಗ್ಗೆ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಲ್ಟಟ್ಟಿರಬೇಕು ಹಾಗೂ ಯಾವ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ಸಾಧಿಸಲಾಗಿದೆ ಎಂಬುದನ್ನು ಸ್ಪಷ್ಟವಾಗಿ ಅರ್ಜಿಯಲ್ಲಿ ನಮೂದಿಸಬೇಕು. ಸಾಧಿಸಿರುವ ಪ್ರತಿಭೆ ಬಗ್ಗೆ ವೃತ್ತ ಪತ್ರಿಕೆಗಳಲ್ಲಿ ಪ್ರಕಟಗೊಂಡಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರ ತಜ್ಞರಿಂದ ಪರೀಕ್ಷಿಸಿರಬೇಕು ಹಾಗೂ ವೃತ್ತ ಪತ್ರಿಕೆಗಳ ತುಣುಕುಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಈ ಹಿಂದೆ ಯಾವುದಾದರೂ ವರ್ಷಗಳಲ್ಲಿ ಯಾವುದಾದರೂ ಅರ್ಜಿ ಪ್ರಶಸ್ತಿಗೆ ಪರಿಗಣಿಸಲ್ಪಟ್ಟಿದಲ್ಲಿ ಪುನಃ ಅವರ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಒಂದೇ ಮಗು ಒಂದಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಅರ್ಜಿ ಸಲ್ಲಿಸಬೇಕಾದಲ್ಲಿ ಪ್ರತಿ ಕ್ಷೇತ್ರಕ್ಕೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು, ಭಾವಚಿತ್ರವನ್ನು ಅರ್ಜಿಯ ಬಲಗಡೆ ಮೂಲೆಯಲ್ಲಿ ಲಗತ್ತಿಸಿ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಬೇಕು ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement