ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಇಂದು ಕಾರ್ಯಾಗಾರ

Lingaraj Badiger
Updated On : 9 Jul 2013, 11:47 am

ರಾಣಿಬೆನ್ನೂರು: ಜು. 9ರಂದು ನಗರದ ಹಲಗೇರಿ ರಸ್ತೆಯಲ್ಲಿರುವ ಕೃಷಿ ಇಲಾಖೆ ಆವರಣದಲ್ಲಿ ಕೃಷಿ ಸಂಬಂಧಿತ ಇಲಾಖೆಗಳ ಏಕಗವಾಕ್ಷಿ ವಿಸ್ತರಣಾ ಪದ್ಧತಿ, ಕೃಷಿ ಉತ್ಸವ, ತಾಲೂಕು ಮಟ್ಟದ ತಾಂತ್ರಿಕ ಕಾರ್ಯಾಗಾರವನ್ನು ಏರ್ಪಡಿಸಿರುವುದಾಗಿ ತಾಂತ್ರಿಕ ಕಾರ್ಯಾಗಾರ ಏರ್ಪಡಿಸಲಾಗಿದೆ.  ಜಿಲ್ಲಾ ಪಂಚಾಯಿತಿ ಹಾವೇರಿ, ತಾಲೂಕು ಪಂಚಾಯಿತಿ ಮತ್ತು ತಾಲೂಕು ಕೃಷಿ ಇಲಾಖೆ ಆಶ್ರಯದಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ೤ ನಾಗನಗೌಡ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ಅನ್ನಭಾಗ್ಯ ಉದ್ಘಾಟನೆ
ಹಾವೇರಿ:  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಶ್ರಯದಲ್ಲಿ ಅನ್ನಭಾಗ್ಯ ಯೋಜನೆಯ(ಬಿಪಿಎಲ್ ಪಡಿತರ ಚೀಟಿದಾರರಿಗೆ 1ಗೆ ಕೆಜಿ ಅಕ್ಕಿ) ಉದ್ಘಾಟನಾ ಸಮಾರಂಭ ಜು.10ರಂದು ಬೆಳಗ್ಗೆ 11ಕ್ಕೆ ಶಿವಶಕ್ತಿ ಪ್ಯಾಲೇಸ್‌ನಲ್ಲಿ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಬಿ. ಹುಕ್ಕೇರಿ ಉದ್ಘಾಟಿಸಲಿದ್ದು, ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ಸಂಸದರಾದ ಶಿವಕುಮಾರ ಉದಾಸಿ, ಪ್ರಹ್ಲಾದ ಜೋಶಿ, ಶಾಸಕರಾದ ಮನೋಹರ ತಹಶೀಲ್ದಾರ, ಕೆ.ಬಿ. ಕೋಳಿವಾಡ, ಬಸವರಾಜ ಶಿವಣ್ಣನವರ, ಬಸವರಾಜ ಬೊಮ್ಮಾಯಿ, ಯು.ಬಿ. ಬಣಕಾರ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಸೋಮಣ್ಣ ಬೇವಿನಮರದ, ಜಿಪಂ ಅಧ್ಯಕ್ಷ ಶಂಕ್ರಣ್ಣ ಮಾತನವರ ಹಾಗೂ ಉಪಾಧ್ಯಕ್ಷೆ ಗೀತಾ ಅಂಕಸಖಾನಿ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ತಿಳಿಸಿದ್ದಾರೆ.
ಕಾನೂನು ಸಾಕ್ಷರತಾ ಕಾರ್ಯಕ್ರಮ
ಹಾವೇರಿ:  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಮುನ್ಸಿಪಲ್ ಹೈಸ್ಕೂಲ್ ಆಶ್ರಯದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಜು. 9ರಂದು ಸಂಜೆ 4.30ಕ್ಕೆ ನಗರದ ಮುನ್ಸಿಪಲ್ ಹೈಸ್ಕೂಲ್‌ನಲ್ಲಿ ಜರುಗಲಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶರಾದ ಎನ್.ಎಸ್. ಪಾಟೀಲ ಉದ್ಘಾಟಿಸುವರು. ಮುನ್ಸಿಪಲ್ ಹೈಸ್ಕೂಲ್ ಮುಖ್ಯಾಧ್ಯಾಪಕಿ ಎಸ್.ಜೆ. ಜಾಗಟಗೇರಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎ. ಹುದ್ದಾರ ಹಾಗೂ ಕಾರ್ಯದರ್ಶಿ ಎಸ್.ಎಸ್. ಹಿರೇತನದ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ನ್ಯಾಯವಾದಿಗಳಾದ ಪರಶುರಾಮ ಅಗಡಿ ಅವರು ಮಕ್ಕಳ ಮೇಲೆ ದೌರ್ಜನ್ಯ ಮತ್ತು ಕಡ್ಡಾಯ ಶಿಕ್ಷಣ ಕಾನೂನು ಕುರಿತು ಹಾಗೂ ಸೋಫೀಯಾ ಇನಾಮದಾರ ಅವರು ಮಕ್ಕಳ ಆರೈಕೆ ಮತ್ತು ರಕ್ಷಣೆ ಅಗತ್ಯ ಕುರಿತು ಉಪನ್ಯಾಸ ನೀಡುವರೆಂದು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement