ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ನವೋದಯ ಶಾಲೆಗೆ ವೀರೇಶ ಮತ್ತಿಕಟ್ಟಿ ಆಯ್ಕೆ

Lingaraj Badiger
Updated On : 15 Jul 2013, 11:47 am

ನರಗುಂದ: ತಾಲೂಕಿನ ಶಿರೋಳ ಗ್ರಾಮದ ಸ್ವಾಮಿ ವಿವೇಕಾನಂದ ನವೋದಯ ತರಬೇತಿ ಶಾಲೆಯ ವೀರೇಶ ಮತ್ತಿಕಟ್ಟಿ ಜವಾಹರ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಪಾಸಾಗಿ, ಜವಾಹರ ನವೋದಯ ವಸತಿ ಶಾಲೆ ಕೋರ್ಲಹಳ್ಳಿಗೆ ಆಯ್ಕೆಯಾಗಿದ್ದಾನೆ. ಆಯ್ಕೆಯಾದ ವಿದ್ಯಾರ್ಥಿಗೆ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಆಡಳಿತ ಮಂಡಳಿ, ಶಾಲೆಯ ಎಲ್ಲ ಶಿಕ್ಷಕ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಜವಾಹರ ನವೋದಯ ಶಾಲೆಗೆ ವಿನಾಯಕ ಆಯ್ಕೆ
ನರಗುಂದ: ತಾಲೂಕಿನ ಕಲ್ಲಾಪುರ ಗ್ರಾಮದ ವಿನಾಯಕ ಮೆಣಸಗಿ, ಜವಾಹರ ನವೋದಯ ವಿದ್ಯಾಲಯ ಮುಂಡರಗಿ ಶಾಲೆಗೆ ಆಯ್ಕೆಯಾಗಿದ್ದಾನೆ. ಆಯ್ಕೆಯಾದ ವಿದ್ಯಾರ್ಥಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
20ರಂದು ಜಿಪಂತ್ರೈಮಾಸಿಕ ಕೆಡಿಪಿ ಸಭೆ
ಗದಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆಯಲ್ಲಿ ಜು. 20ರ ಬೆಳಗ್ಗೆ 11 ಗಂಟೆಗೆ ಜಿಪಂ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಕೆಡಿಪಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತಾವನೆ ಆಹ್ವಾನ
ಗದಗ: ಜಿಲ್ಲೆಯ ಎಲ್ಲ (ಗದಗ ತಾಲೂಕು ಹೊರತುಪಡಿಸಿ) ತಾಲೂಕು ವ್ಯಾಪ್ತಿಯಲ್ಲಿ ಗ್ರಾಪಂ ಮಟ್ಟದಲ್ಲಿನ ಅರ್ಹ ಹಿರಿಯ ನಾಗರಿಕರನ್ನು ಗುರುತಿಸಿ, ಹಿರಿಯ ನಾಗರಿಕರ ಗುರುತಿನ ಚೀಟಿ ಸಿದ್ಧಪಡಿಸಿ ವಿತರಿಸಲು ಅರ್ಹ ಸರ್ಕಾರೇತರ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿರುತ್ತದೆ. ಇಚ್ಛೆಯುಳ್ಳ ಅನುಭವಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವಾ ನಿರತ ಸರ್ಕಾರೇತರ ಸಂಘ ಸಂಸ್ಥೆಯವರು ಪ್ರಸ್ತಾವನೆ ಸಲ್ಲಿಸಬಹುದಾಗಿದೆ. ಪ್ರಸ್ತಾವನೆಗಳನ್ನು ಜು. 22ರ ಒಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆಡಳಿತ ಭವನ ರೂ.ನಂ. 06 ಗದಗ ಇವರಿಗೆ ಸಲ್ಲಿಸಲು ಕೋರಲಾಗಿದೆ. ಪ್ರಸ್ತಾವನೆಯೊಂದಿಗೆ ಸಂಸ್ಥೆಯ ಬೈಲಾ, ಚಾಲ್ತಿಯ ನೊಂದಣಿ ಪ್ರತಿ, ಹಿರಿಯ ನಾಗರಿಕರ ಗುರುತಿನ ಚೀಟಿ ವಿತರಿಸಿದ ಕನಿಷ್ಟ 3 ವರ್ಷ ಅನುಭವ ಇರುವ ದಾಖಲಾತಿ, ಸಂಸ್ಥೆಯು ಕಪ್ಪು ಪಟ್ಟಿಗೆ ಸೇರಿಲ್ಲವೆಂಬುದಕ್ಕೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪತ್ರ, ಇಲಾಖೆ ವಿಧಿಸುವ ಷರತ್ತುಗಳಿಗೆ ಬದ್ಧರಾಗಿರುತ್ತೇವೆ ಎಂಬುವುದಕ್ಕೆ ಮುಚ್ಚಳಿಕೆ ಪತ್ರ ಗಳನ್ನು ಲಗತ್ತಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement