ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

22ರಂದು ಜಾನಪದ ವಿವಿ ಸಂಸ್ಥಾಪನಾ ದಿನಾಚರಣೆ

Lingaraj Badiger
Updated On : 16 Jul 2013, 11:30 am

ಹಾವೇರಿ:  ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನಾಚರಣೆ ಜು.22ರಂದು ಬೆಳಗ್ಗೆ 11ಕ್ಕೆ ಗೊಟಗೋಡಿಯ ನಡುಮನೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಕುಲಸಚಿವ ಡಾ. ಸಿ.ಎ. ಸೋಮಶೇಖರಪ್ಪ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಶ್ವವಿದ್ಯಾಲಯದ ಮುಂದಿನ ಹೆಜ್ಜೆಗಳು ಸಂವಾದ ಕಾರ್ಯಕ್ರಮಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಚಾಲನೆ ನೀಡುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ, ಶಿಗ್ಗಾಂವಿ ಶಾಸಕ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಳ್ಳುವರು.
ಕರ್ನಾಟಕ ಜಾನಪದ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಗೋ.ರು. ಚನ್ನಬಸಪ್ಪ ಅವರು ಉಪಸ್ಥಿತರಿರುವರು ಹಾಗೂ ವಿವಿ ಕುಲಪತಿ ಪ್ರೊ. ಅಂಬಳಿಕೆ ಹಿರಿಯಣ್ಣ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದ ನಂತರ ಮಧ್ಯಾಹ್ನ 2.30ಕ್ಕೆ ಸಂವಾದಗೋಷ್ಠಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಕಲಾ ಪ್ರದರ್ಶನ ಜರುಗಲಿದೆ ಎಂದು ಕುಲಸಚಿವ ಡಾ. ಸಿ.ಎ. ಸೋಮಶೇಖರಪ್ಪ ಅವರು   ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement