ಡಾ. ಅನುಪಮಾ ನಿಧನಕ್ಕೆ ಸಂತಾಪ
ಹಿರೇಕೆರೂರು: ಸಾಹಿತಿ ಡಾ. ಅನುಪಮಾ ಅವರ ನಿಧನಕ್ಕೆ ತಾಲೂಕು ಹಾಗೂ ಜಿಲ್ಲಾ ಚುಟುಕ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. ಜಿಲ್ಲಾಧ್ಯಕ್ಷ ಶಂಕರಾಚಾರಿ ಕಮ್ಮಾರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಂತಾಪ ಸೂಚಕ ಸಭೆಯಲ್ಲಿ ಡಾ. ಅನುಪಮಾ ಅವರ ನಿಧನದಿಂದ ಸಾಹಿತ್ಯ ಲೋಕ ಶ್ರೇಷ್ಠ ಲೇಖಕಿಯನ್ನು ಕಳೆದುಕೊಂಡಿರುವುದು ಸಾಹಿತ್ಯ ಲೋಕಕ್ಕೆ ತುಂಬಲಾರದ ಕೊರತೆಯಾಗಿದೆ ಎಂದು ತಿಳಿಸಿದ್ದಾರೆ ಎಂದಿದ್ದಾರೆ.
ತಾಲೂಕು ಘಟಕದ ಚುಟುಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಸವರಾಜ ಪೂಜಾರ ಮತ್ತಿತರ ಪದಾಧಿಕಾರಿಗಳು ಪಾಲ್ಗೊಂಡಿದ್ದರು.