ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಶೈಕ್ಷಣಿಕ ಪ್ರಗತಿಗೆ ಸಹಕರಿಸಿ

Lingaraj Badiger
Updated On : 16 Jul 2013, 11:26 am

ಬ್ಯಾಡಗಿ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ಸಹಕರಿಸುವಂತೆ ಪುರಸಭೆ ಸದಸ್ಯ ನಾರಾಯಣಪ್ಪ ಕರ್ನೂಲ ಶಿಕ್ಷಕರಿಗೆ ಕರೆ ನೀಡಿದರು. ಸೋಮವಾರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 1ರಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಇದಕ್ಕೆ ಪೂರಕವಾಗಿ ಹಿಂದಿನ ಸರ್ಕಾರ 3,174 ಶಾಲೆಗಳನ್ನು ಮುಚ್ಚಲು ಸಿದ್ಧತೆ ನಡೆಸಿತ್ತು. ಇದರಿಂದ ಸುಮಾರು 9,600 ಶಿಕ್ಷಕರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದರು ಎಂದರು.
   ಖಾಸಗಿ ಶಾಲೆಗಳ ಪೈಪೋಟಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಮಂಕು ಬಡಿದಂತಾಗಿದೆ. ಸರ್ಕಾರ ನೀಡಿದ ಸೌಲಭ್ಯಗಳ ಪ್ರಯೋಜನವಾಗಬೇಕಾದಲ್ಲಿ ಗುಣಮಟ್ಟದ ಶಿಕ್ಷಣ ಜತೆಗೆ ಶಿಕ್ಷಕರು ಸೇರಿದಂತೆ ಮಕ್ಕಳನ್ನು ಕ್ರಿಯಾಶೀಲಗೊಳಿಸುವ ಕೆಲಸವಾಗಬೇಕಾಗಿದೆ ಎಂದರು. ಸರ್ಕಾರದ ಯೋಜನೆಗಳು ಮಕ್ಕಳು ಶಿಕ್ಷಣದಿಂದ ವಂಚಿತರಾಗದಿರಲಿ ಎಂಬುದಾಗಿದೆ. ಅವರಲ್ಲಿರುವ ಬೌದ್ಧಿಕ ಶಕ್ತಿಗೆ ಪೂರಕ ಶಿಕ್ಷಣವನ್ನು ನೀಡಿದಾಗ ಮಾತ್ರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಈ ನಿಟ್ಟಿನಲ್ಲಿ ಶಿಕ್ಷಕರು ಹೆಚ್ಚು ಶ್ರಮಿಸುವಂತೆ ಕರೆ ನೀಡಿದರು.
ಸರ್ವಶಿಕ್ಷಣ ಅಭಿಯಾನದಡಿಯಲ್ಲಿ ದಾಖಲಾದ ಎಲ್ಲ ಮಕ್ಕಳಿಗೆ ಉಚಿತವಾಗಿ ಪಠ್ಯಪುಸ್ತಕ, ನೋಟ್‌ಬುಕ್, ಮಧ್ಯಾಹ್ನದ ಬಿಸಿಯೂಟ, ಸೈಕಲ್, ಶಿಷ್ಯವೇತನ ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸಲಾಗಿದೆ. ಇವುಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಮುಖ್ಯ ಶಿಕ್ಷಕ ಎಚ್.ಎಫ್. ಭಜಂತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುರಸಭೆ ಸದಸ್ಯರಾದ ರಾಜೇಸಾಬ್ ಕನವಳ್ಳಿ, ನೀಲಮ್ಮ ದೊಡ್ಡಮನಿ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಇಬ್ರಾಹಿಂ ಮುಲ್ಲಾ, ಎಸ್‌ಡಿಎಂಸಿ ಸದಸ್ಯ ರಾಜು ಕಳ್ಯಾಳ, ಗುಲಾಬ್‌ಸಾಬ ಫಕ್ಕೀರ, ಜೆ.ಡಿ. ಮಹೇಂದ್ರಕರ ಇದ್ದರು. ಎ.ಎ. ಕಿಲ್ಲೇದಾರ ಸ್ವಾಗತಿಸಿದರು. ಕೆ.ಆರ್. ದ್ರಾಕ್ಷಾಯಿಣಿ ನಿರೂಪಿಸಿದರು. ಆರ್.ಆರ್. ಆಡೂರು ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement