ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

13 ಕೈಗಾರಿಕೆ ಪ್ರಾರಂಭಕ್ಕೆ ಸಚಿವ ಸಂಪುಟ ಒಪ್ಪಿಗೆ: ಕೋಳಿವಾಡ

Vishwanath S
Updated On : 21 Jul 2013, 11:21 am

ರಾಣಿಬೆನ್ನೂರು: ಹಾವೇರಿ ಜಿಲ್ಲೆಯಲ್ಲಿ ವೈದ್ಯಕೀಯ ಶಿಕ್ಷಣ ಕಾಲೇಜು ಸ್ಥಾಪಿಸಲು ಹಾಗೂ ಜಿಲ್ಲಾದ್ಯಂತ ಸಣ್ಣ, ಅತಿ ಸಣ್ಣ ಮತ್ತು ದೊಡ್ಡ ಕೈಗಾರಿಕೆ ಸೇರಿದಂತೆ 13 ಕೈಗಾರಿಕೆಗಳನ್ನು ಪ್ರಾರಂಭಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಮಾಜಿ ಸಚಿವ, ಶಾಸಕ ಕೆ.ಬಿ. ಕೋಳಿವಾಡ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸಂಜೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ತಾಲೂಕಿನ ಹಾಗೂ ಜಿಲ್ಲೆಯ ಸಮಸ್ತ ಜನತೆಯ ಸರ್ವತೋಮುಖ ಅಭಿವೃದ್ಧಿ ಹಿತದೃಷ್ಟಿಯಿಂದ ಶಾಸಕನಾದ ನಾನು ವಿಧಾನ ಸೌಧದ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಜನತೆಯ ಪ್ರತಿನಿಧಿಯಾಗಿ ಹಾವೇರಿ ಜಿಲ್ಲೆಗೆ ವೈದ್ಯಕೀಯ ಶಿಕ್ಷಣ ಕಾಲೇಜನ್ನು ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸುವುದಕ್ಕಾಗಿ ಕೈಗಾರಿಕೆಗಳನ್ನು ಮುಂಜೂರು ಮಾಡಬೇಕೆಂದು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿದ ಸಮಯದಲ್ಲಿ ಜಿಲ್ಲೆಗೆ ವೈದ್ಯಕೀಯ ಶಿಕ್ಷಣ ಕಾಲೇಜು ಹಾಗೂ 13 ಕೈಗಾರಿಕೆಗಳನ್ನು ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಬಂಧಿಸಿದ ಇಲಾಖೆ ಸಚಿವರು ಒಪ್ಪಿಗೆ ನೀಡಿದರು ಎಂದರು.
ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆ, ತಾಲೂಕಿನ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ವಿವಿಧ ಇಲಾಖೆಗೆ ಸಂಬಂಧಿಸಿರುವ 30 ಪ್ರಶ್ನೆಗಳನ್ನು ನಾನು ಕೇಳಿದ್ದು, ತುಂಗಾ ಮೇಲ್ದಂಡೆ ನೀರಾವರಿ ಯೋಜನೆ ಕಾಮಗಾರಿ ಸಂಪೂರ್ಣ ಮುಕ್ತಾಯ ಹಂತಕ್ಕೆ ಬಂದಿದೆ. 2015ರೊಳಗಾಗಿ ಯೋಜನೆ ವ್ಯಾಪ್ತಿಯ ಎಲ್ಲಾ ರೈತರ ಜಮೀನುಗಳಿಗೆ ನೀರುಣಿಸಲಾಗುವುದು ಎಂದರು. ಉತ್ತರ ಕರ್ನಾಟಕದ ಜಿಲ್ಲೆಯ ನೀರುದ್ಯೋಗಿಗಳಿಗೆ ಕಾಯಂ ಉದ್ಯೋಗ ಒದಗಿಸುವುದಕ್ಕಾಗಿ 1031 ವಿವಿಧ ಕೈಗಾರಿಕೆಗಳನ್ನು ಪ್ರಾರಂಭಿಸಲಾಗುವುದೆಂದು ಸಿಎಂ ಉತ್ತರಿಸಿದ್ದಾರೆ. ತುಂಗಭದ್ರಾ-ಕಮದ್ವತಿ ಪ್ರವಾಹಕ್ಕೆ ತುತ್ತಾಗಿರುವ ಮುಷ್ಟೂರು ಗ್ರಾಮ, ಹರಿಹರ ಪಾಲಿ ಪೈಬರ್ಸ್ ಕೈಗಾರಿಕೆಯ ವಾಯು ಮಾಲಿನ್ಯದಿಂದ ಹಾನಿಗೊಳಗಾಗಿರುವ ನೆಲವಾಗಲ ಗ್ರಾಮ ಸಂಪೂರ್ಣ ಸ್ಥಳಾಂತರಿಸಲು ನಗರದ ಹುಣಶಿಕಟ್ಟಿ ರಸ್ತೆಯಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗಾಗಿ ಹಣ ನೀಡಲು, ಕಾಲೇಜಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿರುವುದೆಂದು ಶಾಸಕ ಕೆ.ಬಿ. ಕೋಳಿವಾಡ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement