ಕುಳೇನೂರ ಗ್ರಾಮಸಭೆ ಮುಂದೂಡಿಕೆ
ಹಾವೇರಿ: ಧಾರವಾಡ ಕ್ಷೇತ್ರದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಆದ್ದರಿಂದ ಜುಲೈ 30ರಂದು ಜರುಗಬೇಕಿದ್ದ ಕುಳೇನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಭೆಗಳನ್ನು ರದ್ದುಪಡಿಸಲಾಗಿದೆಯೆಂದು ಕುಳೇನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.