ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಖಾತ್ರಿ ಯೋಜನೆ ಸದುಪಯೋಗಪಡಿಸಿಕೊಳ್ಳಿ

Lingaraj Badiger
Updated On : 30 Jul 2013, 11:04 am

ಹಿರೇಕೆರೂರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗ್ರಾಮಗಳ ಅಭಿವೃದ್ಧಿಗೆ ಸಾಕಷ್ಟು ಸಹಕಾರಿ, ಈ ಯೋಜನೆಯಲ್ಲಿ ಜನಪರವಾದ ಕಾಮಗಾರಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಾಮಾಜಿಕ ಲೆಕ್ಕ ಪರಿಶೋಧನೆ ಸಂಯೋಜಕ ಮಂಜುನಾಥ ಹೊರಕೇರಿ ಹೇಳಿದರು.
ತಾಲೂಕಿನ ಎಂ.ಕೆ. ಯತ್ತಿನಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ನಡೆದ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮೊದಲ ಸುತ್ತಿನ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷೆ ರೇಖಾ ನಾಗರಾಜ ನರಸಾಪುರ ಉದ್ಘಾಟಿಸಿದರು. ನಂತರ ಲೆಕ್ಕ ಪರಿಶೋಧನಾ ತಂಡದವರಿಂದ ಗ್ರಾಪಂ ವತಿಯಿಂದ ನಡೆದಿರುವ ವಿವಿಧ ಕಾಮಗಾರಿಗಳ ಕಡತಗಳನ್ನು ಮತ್ತು ಗ್ರಾಮದ ಮನೆ ಮನೆಗೆ ತೆರಳಿ ಉದ್ಯೋಗ ಚೀಟಿ ಹಾಗೂ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ವಿ.ಸಿ. ಅಂಗಡಿ, ಅಭಿವೃದ್ಧಿ ಅಧಿಕಾರಿ ಎನ್.ಎಂ. ಕೊಣಸಾಲಿ, ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement