ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಸುದ್ದಿ ಸಂಕ್ಷೇಪ

Mainashree
Updated On : 3 Jun 2013, 11:02 am

10ರಂದು ಹಾವೇರಿ ತಾಪಂ ಸಾಮಾನ್ಯ ಸಭೆ
ಹಾವೇರಿ:
ಹಾವೇರಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಜೂನ್ 10ರ ಬೆಳಗ್ಗೆ 10.30ಕ್ಕೆ ತಾಲೂಕು ಪಂಚಾಯಿತಿ ಅಧ್ಯಕ್ಷೆ   ಮೆಹರುನ್ನಿಸಾ ಜಿಗಳೂರ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಲಿದೆ ಎಂದು  ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರುದ್ಯೋಗಿ ಸ್ತ್ರೀಯರಿಂದ ಅರ್ಜಿ ಆಹ್ವಾನ
ಹಾವೇರಿ:
ಜಿಲ್ಲೆಯಲ್ಲಿ ಮಹಿಳಾ ತರಬೇತಿ ಯೋಜನೆಯಡಿ ಕಂಪ್ಯೂಟರ್ ಬೇಸಿಕ್ ಹಾಗೂ ಹಾರ್ಡ್‌ವೇರ್ (Including P.C &  Laptop Servicing) Networking & Spoken English & Communication Skill Training and BPO) ತರಬೇತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಜೂನ್ 20ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು 18ರಿಂದ 40 ವರ್ಷದೊಳಗಿನವರಾಗಿದ್ದು, ವಾರ್ಷಿಕ ಆದಾಯ ರು. 40 ಸಾವಿರ ಮೀರಿರಬಾರದು. ಪೂರ್ವ ಶಿಕ್ಷಣದಲ್ಲಿ ಉತ್ತೀರ್ಣ, ಅನುತ್ತೀರ್ಣರಾದವರು ಹಾಗೂ ಅದಕ್ಕಿಂತ ಹೆಚ್ಚಿನ ಶಿಕ್ಷಣ, ಎಸ್ಸೆಸ್ಸೆಲ್ಸಿ ನಂತರ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಪದವಿ ಹೊಂದಿದವರು ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಚನ್ನಮ್ಮ ಹೊಳಿಹೊಸೂರು ತಿಳಿಸಿದ್ದಾರೆ. ಅಭ್ಯರ್ಥಿಗಳು ಸ್ವ-ವಿವರವುಳ್ಳ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಹಾವೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮತ್ತು ಹೈಸ್ಕೂಲ್ ರೋಡ್‌ನಲ್ಲಿರುವ ಶ್ರೀ ಶಿವಲಿಂಗೇಶ್ವರ ಕಂಪ್ಯೂಟರ್ಸ್, ಬ್ಯಾಡಗಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮತ್ತು ಎಲ್‌ಐಸಿ ಎದುರಿಗಿರುವ ಶ್ರೀ ಶಿವಲಿಂಗೇಶ್ವರ ಕಂಪ್ಯೂಟರ್ಸ್‌ಗೆ ಸಲ್ಲಿಸಬೇಕು. ಅರ್ಜಿ ಸಲ್ಲಿದ ಅಭ್ಯರ್ಥಿಗಳು 26, ಜೂನ್, 2013ರಂದು ಹಾವೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, 27 ಜೂನ್ 2013ರಂದು ಬ್ಯಾಡಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗಳಿಗೆ ಬೆಳಗ್ಗೆ 11 ಗಂಟೆಗೆ ಸಂದರ್ಶನಕ್ಕೆ ಹಾಜರಾಗಬೇಕೆಂದು ತಿಳಿಸಿದ್ದಾರೆ. ಮಾಹಿತಿಗೆ  ಹಾವೇರಿ, ಬ್ಯಾಡಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಿ.
ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಹಾವೇರಿ:
ಹಾವೇರಿಯ ವಿಶ್ವೇಶ್ವರತೀರ್ಥ ನಗರದ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಒಂದು ಅಂಗನವಾಡಿ ಸಹಾಯಕಿ ಹುದ್ದೆಗೆ ಗೌರವಧನ ಆಧಾರದ ನೇಮಕಕ್ಕೆ 24 ಜೂನ್, 2013ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅದೇ ನಗರದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಕನಿಷ್ಠ 4ನೇ ತರಗತಿ ಓದಿರಬೇಕು. 18ರಿಂದ 44 ವರ್ಷದೊಳಗಿರಬೇಕು. ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಿಗದಿತ ದಿನಾಂಕದೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹಾವೇರಿ ಇವರಿಗೆ ಸಲ್ಲಿಸಬೇಕು. ಮಾಹಿತಿಗೆ  ಹಾವೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement