7ರಂದು ನೇರ ಸಂದರ್ಶನ
ಹಾವೇರಿ: ಹಾವೇರಿಯ ವಿಜಯ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯುವ 30 ದಿನಗಳ ಬೇಸಿಕ್ ಕಂಪ್ಯೂಟರ್ ತರಬೇತಿಗಾಗಿ ಜೂ. 7ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆಡಳಿತ ಭವನ ಹಿಂಭಾಗದಲ್ಲಿರುವ ವಿಜಯ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನೇರ ಸಂದರ್ಶನ ಜರುಗಲಿದೆ. ಕನಿಷ್ಠ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿರುವ ಮತ್ತು ಸ್ವ-ಉದ್ಯೋಗ ಕೈಗೊಳ್ಳಲು ಇಚ್ಛಿಸುವ 18ರಿಂದ 40 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ- 08375-249160ನ್ನು ಸಂಪರ್ಕಿಸಬಹುದು.