ಜಾಗೃತಿಯಿಂದ ಬಾಲಕಾರ್ಮಿಕ ಪದ್ಧತಿ ತೊಲಗಿಸಿ: ಡಿಸಿ
ಹಾವೇರಿ: ವಿಶ್ವ ಬಾಲಕಾರ್ಮಿಕ ದಿನಾಚರಣೆ ಜೂನ್ 12ರಂದು ಜರುಗಲಿದ್ದು, ಇದರ ಅಂಗವಾಗಿ ಮಂಗಳವಾರ ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಏಕಕಾಲಕ್ಕೆ ಕಾರ್ಯಕ್ರಮ ಏರ್ಪಡಿಸುವಂತೆ ತಿಳಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಸಿ.ಬಿ. ಹೊರಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಎಚ್.ಎಸ್. ರಾಘವೇಂದ್ರಸ್ವಾಮಿ, ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ ಹೊರಪೇಟೆ, ಪೊಲೀಸ್ ಇಲಾಖೆ ಉಪ ಅಧೀಕ್ಷಕ ಸಿ.ಸಿ. ಪಾಟೀಲ, ಚೆನ್ನಮ್ಮ ಹೊಳಿಹೊಸೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಿ.ಎಚ್. ಲಲಿತಾ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ರಾಮಶೆಟ್ಟಿ, ವಾರ್ತಾ ಸಹಾಯಕ ವಸಂತ ಮಡ್ಲೂರ, ಹಾವೇರಿಯ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಸ್ಥೆಯ ಕ್ಷೇತ್ರಾಧಿಕಾರಿ ವಿನಯ ಘೋರ್ಪಡೆ ಹಾಜರಿದ್ದರು.