ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Vishwanath S
Updated On : 12 Jun 2013, 11:01 am

ಹಾವೇರಿ: ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರವು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು (ಅತೀ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಮಂತ್ರಾಲಯ) ನೋಡೆಲ್ ಏಜನ್ಸಿ ಮೂಲಕ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನಾ ಯೋಜನೆ(ಪಿಎಂಇಜಿಪಿ) ಕಾರ್ಯಕ್ರಮ ಜಾರಿಗೆ ತಂದಿದೆ. ಫಲಾನುಭವಿಗಳು ಆರಂಭಿಸುವ ಕೈಗಾರಿಕೆಯು ಉತ್ಪಾದನಾ ಚಟುವಟಿಕೆಯಾಗಿದ್ದರೆ ಗರಿಷ್ಠ ರು. 20 ಲಕ್ಷ ಹಾಗೂ ಸೇವಾ ಚಟುವಟಿಕೆಯಾಗಿದ್ದರೆ ಗರಿಷ್ಠ ರು. 10 ಲಕ್ಷವರೆಗೆ ಬ್ಯಾಂಕುಗಳ ಮುಖಾಂತರ ಸಾಲ ಸೌಲಭ್ಯಕ್ಕೆ ಅವಕಾಶವಿದ್ದು, ಅರ್ಹ ಅಭ್ಯರ್ಥಿಗಳಿಂದ ಜೂ. 30ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ವಿ.ಎಂ. ಸೂರಣಗಿ ತಿಳಿಸಿದ್ದಾರೆ. ಆಸಕ್ತಿಯುಳ್ಳ 18 ವರ್ಷ ಮೇಲ್ಪಟ್ಟ ನಿರುದ್ಯೋಗಿ ಯುವಕ-ಯುವತಿಯರು ಹೊಸ ಕೈಗಾರಿಕೆ ಮತ್ತು ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಸಾಲ ಸೌಲಭ್ಯ ಪಡೆಯಬಹುದಾಗಿದೆ. ನಗರದ ಪ್ರದೇಶದ ಸಾಮಾನ್ಯ ವರ್ಗದವರಿಗೆ ಶೇ. 15 ಹಾಗೂ ಗ್ರಾಮೀಣ ಪ್ರದೇಶದವರಿಗೆ ಶೇ. 25ರಷ್ಟು ಮಾರ್ಜಿನ್ ಮನಿ ಸೌಲಭ್ಯವಿದೆ. ನಿಗದಿತ ಅರ್ಜಿ ನಮೂನೆಯನ್ನು ಹಾವೇರಿ ಜಿಲ್ಲಾ ಕೈಗಾರಿಕಾ ಕೇಂದ್ರ, ಖಾದಿ ಅಥವಾ ಬೆಂಗಳೂರಿನ ಗ್ರಾಮೋದ್ಯೋಗ ಮಂಡಳಿ ಇಲ್ಲವೆ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಿಂದ ಉಚಿತವಾಗಿ ಪಡೆದು, ಅರ್ಜಿ ನಿಗದಿತ ದಿನಾಂಕದೊಳಗೆ ಕಚೇರಿಗೆ ಸಲ್ಲಿಸಬಹುದು. ಮಾಹಿತಿಗೆ ಹಾವೇರಿ ಜಿಲ್ಲಾ ಕೈಗಾರಿಕಾ ಕೇಂದ್ರ (ದೂ: 08375-249028, 29 ಹಾವೇರಿ, ಹಾನಗಲ್ಲ, ಬ್ಯಾಡಗಿ, ರಾಣಿಬೆನ್ನೂರು, ಹಿರೇಕೆರೂರು, ಸವಣೂರು, ಶಿಗ್ಗಾಂವಿ ತಾಪಂ ಕೈಗಾರಿಕಾ ವಿಸ್ತರಣಾಧಿಕಾರಿಗಳು, ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು(ದೂ: 08375-235380), ಎನ್.ಎಂ. ಜೋಗ್, ಸಹಾಯಕ ಅಭಿವೃದ್ಧಿ ಅಧಿಕಾರಿ, ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ, ವಿಜನಾಪುರ ಎಫ್‌ಸಿಐ ಗೋಡೌನ ಹತ್ತಿರ, ದೂರವಾಣಿ ನಗರ, ಬೆಂಗಳೂರು-560016 (ದೂರವಾಣಿ: 080-2566588 ಮೊ: 7760023397) ಅವರನ್ನು ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement