ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಸಚಿವ ಮಹದೇವಪ್ಪಗೆ ಅಭಿನಂದನೆ

Lingaraj Badiger
Updated On : 14 Jun 2013, 11:18 am

ಶಿಗ್ಗಾಂವಿ: ಲೋಕೋಪಯೋಗಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಪಟ್ಟಣಕ್ಕೆ ಆಗಮಿಸಿದ ಎಚ್.ಸಿ. ಮಹದೇವಪ್ಪ ಅವರನ್ನು ಶಿಗ್ಗಾಂವಿ-ಸವಣೂರು ವಿಧಾನಸಭೆ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅಭಿನಂದಿಸಿದರು.
ಅಲ್ಲದೆ ನಮ್ಮ ವಿಧಾನಸಭೆ ಕ್ಷೇತ್ರದಲ್ಲಿ ಶಿಗ್ಗಾಂವಿ-ಸವಣೂರು ತಾಲೂಕುಗಳಲ್ಲಿ ತಮ್ಮ ಇಲಾಖೆಯಿಂದ ಬರುವ ಅನೇಕ ಜನಪರ ಸಮುದಾಯ ಭವನ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಲನಿಗಳಲ್ಲಿ ರಸ್ತೆ ನಿರ್ವಹಣೆ, ರೈತರ ಜಮೀನುಗಳಿಗಾಗಿ ಸುರಕ್ಷಿತವಾದ ರಸ್ತೆ, ಗ್ರಾಮೀಣ ಭಾಗದಲ್ಲಿ ಜನರಿಗೆ ಬಯಲು ರಂಗಮಂದಿರ, ತಾಲೂಕು ಮಟ್ಟದ ಪ್ರಮುಖ ರಸ್ತೆ ಹಾಗೂ ಬಾಂದಾರ ನಿರ್ಮಾಣ ಹೆಚ್ಚಿನ ಅನುದಾನ ಮಂಜೂರು ಮಾಡಬೇಕು ಎಂದು ಶಿಗ್ಗಾಂವಿ-ಸವಣೂರು ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಮನವಿ ಸಲ್ಲಿಸಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ವಿ.ವೈ. ಪಾಟೀಲ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರನಗೌಡ ಎಸ್. ಪಾಟೀಲ, ತಾಪಂ ಮಾಜಿ ಸದಸ್ಯ ಇಸುಫ್‌ಸಾಬ್ ಬಾವಿಕಟ್ಟಿ, ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗ ಕಾರ್ಯದರ್ಶಿ ಶಿವಾನಂದ ರಾಮಗೇರಿ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement