ಡೆಂಘೀ ಜಾಗೃತಿ ಜಾಥಾಕ್ಕೆ ಚಾಲನೆ
ಹಾನಗಲ್ಲ: ತಾಲೂಕು ಆಡಳಿತದಿಂದ ಹಾನಗಲ್ಲಿನಲ್ಲಿ ಹಮ್ಮಿಕೊಂಡಿದ್ದ ಡೆಂಘೀ ಜ್ವರ ನಿಯಂತ್ರಣ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲನಗೌಡ ವೀರನಗೌಡ್ರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಶನಿವಾರ ಬೆಳಗ್ಗೆ ಸಾಮರ್ಥ್ಯ ಸೌಧದಿಂದ ಪ್ರಾರಂಭಗೊಂಡ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಡೆಂಘೀ ರೋಗದ ಬಗೆಗೂ ಸ್ವಚ್ಛತೆ ಕಾಪಾಡುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ತಹಸೀಲ್ದಾರ್ ನಾಗೇಂದ್ರ ಹೊನ್ನಳ್ಳಿ, ಲೋಕೋಪಯೋಗಿ ಇಲಾಖೆ ಅಭಿಯಂತರ ಬಿ.ವೈ. ಬಂಡಿವಡ್ಡರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಆರ್. ಶೆಟ್ಟರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮನೋಜಕುಮಾರ ಗಡಬಳ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ ನೋಡಲ್ ವೈದ್ಯಾಧಿಕಾರಿ ಡಾ. ಮಾರುತಿ ಚಿಕ್ಕಣ್ಣನವರ, ತಾಲೂಕು ವೈದ್ಯಾಧಿಕಾರಿ ಡಾ. ರಾಜೇಂದ್ರ ಗೊಡ್ಡೆಮ್ಮಿ, ಮುಖ್ಯ ವೈದ್ಯಾಧಿಕಾರಿ ಡಾ. ನಾಗರಾಜ ಕುರಿ, ಪುರಸಭಾ ಮುಖ್ಯಾಧಿಕಾರಿ ಎಂ.ಎಸ್. ಸೋಮಶೇಖರ, ಖಾಸಗಿ ವೈದ್ಯರಾದ ಎಸ್.ಆರ್. ಕಿತ್ತೂರುಮಠ, ಬಸವರಾಜ ಹುಲಿಕಟ್ಟಿ, ಫಿದಾಅಹ್ಮದ ನಾಯಕ, ಎಂ.ಎಸ್. ಸೋಮಶೇಖರ, ಪುರಸಭೆ ಆರೋಗ್ಯ ಅಧಿಕಾರಿ ಎಸ್. ಶಿವರುದ್ರಪ್ಪ, ಆರೋಗ್ಯ ನಿರೀಕ್ಷಕ ಎಂ.ಎ. ಚೂಡಿಗಾರ, ಸಂಘಟನಾ ಅಧಿಕಾರಿ ಶಿವಾನಂದ ಕ್ಯಾಲಕೊಂಡ, ಆಶಾ ಕಾರ್ಯಕರ್ತೆಯರು, ನ್ಯೂ ಕಾಂಪೋಸಿಟ್ ಜ್ಯೂನಿಯರ್ ಕಾಲೇಜಿನ ಹೈಸ್ಕೂಲ್ ವಿದ್ಯಾರ್ಥಿಗಳು ಹಾಗೂ ವಿರಾಟ ನಗರ ಪ್ರೌಢಶಾಲೆ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.