ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಪ್ರಶಸ್ತಿಗೆ ಕೃತಿಗಳ ಆಹ್ವಾನ

Vishwanath S
Updated On : 16 Jun 2013, 11:03 am

ಹಾವೇರಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2012ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಜುಲೈ 15ರೊಳಗಾಗಿ ಆಹ್ವಾನಿಸಲಾಗಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2012ರ ಜನವರಿ 1ರಿಂದ 2012ರ ಡಿಸೆಂಬರ್ 31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಯಾಗಿರಬೇಕು. ಕೃತಿಯ ತಾಂತ್ರಿಕ ಪುಟದಲ್ಲಿ ಪ್ರಥಮ ಮುದ್ರಣ-2012 ಎಂದು ಮುದ್ರಿತವಾಗಿರಬೇಕು. ಕಾವ್ಯ (ವಚನಗಳು ಮತ್ತು ಹನಿಗವನಗಳು ಸೇರಿ), ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ(ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ), ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ, ಆತ್ಮಕಥೆ(ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನ), ಸಾಹಿತ್ಯ ವಿಮರ್ಶೆ (ಸಾಹಿತ್ಯ ಚರಿತ್ರೆ, ಸಾಹಿತ್ಯ ತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ (ಪಿ. ಶ್ರೀನಿವಾಸರಾವ್ ದತ್ತಿನಿಧಿ ಬಹುಮಾನ), ಗ್ರಂಥ ಸಂಪಾದನೆ (ಪ್ರಾಚೀನ ಕೇತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ( ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಎಂಜಿನಿಯರಿಂಗ್, ವೈದ್ಯ, ಭೂ, ಖಗೋಳ, ಗೃಹ ವಿಜ್ಞಾನ, ಪರಿಸರ-ಇತ್ಯಾದಿ), ಮಾನವಿಕಗಳು(ಇತಿಹಾಸ, ರಾಜಕೀಯಶಾಸ್ತ್ರ, ಸಮಾಜಶಾಸ್ತ್ರ, ಮಾನವಶಾಸ್ತ್ರ, ಮನಃಶಾಸ್ತ್ರ, ಭಾಷಾಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹ ಸಂವಹನ, ಧಾರ್ಮಿಕ, ಧಾರ್ಶನಿಕ), ಸಂಶೋಧನೆ(ಕನ್ನಡ ಭಾಷೆ ಮತ್ತು ಸಂಸ್ಕೃತಿಗಳಿಗೆ ಸಂಬಂಧಿಸಿದ ಸಂಶೋಧನೆ), ಅನುವಾದ-1(ಕಾದಂಬರಿ, ಕಾವ್ಯ ಸಣ್ಣಕತೆ, ನಾಟಕ, ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಜೀವನಚರಿತ್ರೆ- ಇತ್ಯಾದಿ ಸೃಜನಶೀಲ ಕೃತಿಗಳು). ಮೇಲ್ಕಂಡ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ಒಂದೊಂದು ಸಾದಾ ಪ್ರತಿಯನ್ನು ರಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ರಿಜಿಸ್ಟರ್ಡ್ ಅಂಚೆ, ಕೋರಿಯರ್ ಮೂಲಕ ಅಥವಾ ಖುದ್ದಾಗಿ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ  ಢಿಢಿಢಿ.್ಞಛ್ಠಟಿಛಡಿಛ್ಞಛಡಝ್ಝಡಿಣಛಛ್ಛಛಜಜಟಣ.್ಟ್ಠ್ಜ ಹಾಗೂ ದೂರವಾಣಿ ಸಂಖ್ಯೆ: 080- 22106460ನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement