ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಗುಣಮಟ್ಟದ ಕಾಮಗಾರಿ ಕೈಗೊಳ್ಳಿ: ಬಣಕಾರ

Rashmi Kasaragodu
Updated On : 30 Jun 2013, 1:11 am

ಹಿರೇಕೆರೂರು: ಗುತ್ತಿಗೆದಾರರು ಪೂರೈಸಿದ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ತಾವು ಮಾಡಿದ ಕೆಲಸ ಶಾಶ್ವತವಾಗಿ ಜನರ ನೆನಪಿನಲ್ಲಿ ಇರುವಂತೆ ಯಾವುದೆ ನ್ಯೂನತೆ ಇಲ್ಲದೆ ಪ್ರಾಮಾಣಿಕವಾಗಿ ಪೂರೈಸಬೇಕು ಎಂದು ಶಾಸಕ ಯು.ಬಿ. ಬಣಕಾರ ಗುತ್ತಿಗೆದಾರರಿಗೆ ಕರೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಲೋಕೋಪಯೋಗಿ ಗುತ್ತಿಗೆದಾರರ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಾಮಗಾರಿ ಕಳಪೆಯಾದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಹಿರಿಯ ಅಧಿಕಾರಿಗಳ ಗಮನ ಸೆಳೆಯುವುದಾಗಿ ತಿಳಿಸಿದರು. ಸಾರ್ವಜನಿಕರು ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ಇಲಾಖೆಯ ಕಚೇರಿಗಳಿಗೆ ಬೀಗ ಹಾಕದಂತೆ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸುವಂತೆ ಎರಡೂ ಇಲಾಖೆಯ ಅಭಿಯಂತರರಿಗೆ ಸೂಚಿಸಿದರು.
ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಎನ್. ಗಂಗೋಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಗುತ್ತಿಗೆದಾರರ ಸಂಘದ ಲಿಂಗರಾಜ ಚಪ್ಪರದಳ್ಳಿ, ಲೋಕೋಪಯೋಗಿ ಇಲಾಖೆ ಅಭಿಯಂತ ಎಂ.ಬಿ. ತುರಮುರಿ, ಜಿಲ್ಲಾ ಪಂಚಾಯತ್ ಎಂಜಿನಿಯರಿಂಗ್ ಉಪವಿಭಾಗ ಅಧಿಕಾರಿ ಪಶುಪತಿ, ತಾಲೂಕು ಕೆಜೆಪಿ ಅಧ್ಯಕ್ಷ ಮಹೇಶ ಗುಬ್ಬಿ, ತಾಪಂ ಸ್ಥಾಯಿ ಸಮಿತಿ ಸದಸ್ಯ ಚಂದ್ರು ಅಣ್ಣಪ್ಪನವರ, ಕೆ.ಎಲ್. ಉಪ್ಪಾರ, ಪ್ರಕಾಶ ಗೌಡರ್, ಎಸ್.ಬಿ. ಗೌರಕ್ಕನವರ, ಎಂ.ಎಸ್. ಪ್ರಕಾಶ ಹಾಗೂ ಹಿರಿಯ, ಕಿರಿಯ ಗುತ್ತಿಗೆದಾರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement