ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಯುವಕರು ಕ್ರೀಡೆಗಳಲ್ಲಿ ಪಾಲ್ಗೊಳ್ಳಿ: ಡಾ. ಮರಗಬ್ಬಿನ

Mainashree
Updated On : 3 Mar 2013, 11:42 am

ಹಾವೇರಿ: ಸಾಮಾಜಿಕ ಹಾಗೂ ದೈಹಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಕ್ರೀಡೆ ಹೆಚ್ಚು ಸಹಕಾರಿಯಾಗಿದೆ. ದೈಹಿಕ ಹಾಗೂ ಮಾನಸಿಕ ಸದೃಢತೆ ದೃಷ್ಠಿಯಿಂದ ಯುವಪೀಳಿಗೆ ಕ್ರೀಡೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ತಾಪಂ ಸದಸ್ಯ ಡಾ. ವಿ.ಎಚ್. ಮರಗಬ್ಬಿನ ಸಲಹೆ ಮಾಡಿದರು.
ನೆಹರು ಯುವಕೇಂದ್ರ, ಚೈತನ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಗಳ ಆಶ್ರಯದಲ್ಲಿ ತಾಲೂಕಿನ ನೆಗಳೂರು ಗ್ರಾಮದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ. ವಿದೇಶಿ ಕ್ರೀಡೆಗಳ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಪ್ರತೀಕದಂತಿರುವ ಗ್ರಾಮೀಣ ಕ್ರೀಡೆಗಳು ನಶಿಸುತ್ತಿರುವುದು ದುರಂತ. ಕ್ರಿಕೆಟ್‌ಗೆ ಹೆಚ್ಚು ಪ್ರೋತ್ಸಾಹ ದೊರೆಯುತ್ತಿದ್ದು, ಗ್ರಾಮೀಣ ಕ್ರೀಡೆಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಂಘ-ಸಂಸ್ಥೆಗಳು ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ ಎಂದರು. ಎಸ್.ಎಚ್. ಮಜೀದ್ ಪ್ರಾಸ್ತಾವಿಕ ಮಾತನಾಡಿ, ದೇಶದಲ್ಲಿ ಯುವ ಜನರ ಪ್ರಮಾಣ ಶೇ. 40ರಷ್ಟಿದೆ. ಗ್ರಾಮೀಣ ಯುವಜನರನ್ನು ಸಂಘಟಿಸಿ, ಅವರಲ್ಲಿ ಜೀವನ ಮೌಲ್ಯಗಳನ್ನು ಮತ್ತು ಕೌಶಲ್ಯಗಳನ್ನು ಸಂವರ್ಧನೆಗೊಳಿಸಿ, ನವ ಭಾರತದ ಜವಾಬ್ದಾರಿಯುತ ನಾಗರಿಕರಾಗುವಂತೆ ಅವರನ್ನು ತಯಾರು ಮಾಡಬೇಕಿದೆ. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾಸಕ್ತಿ ಮೂಡಿಸಲಾಗುತ್ತಿದೆ. ಆದರೆ, ಗ್ರಾಮೀಣ ಪ್ರದೇಶದ ಯುವ ಜನರ ಪ್ರತಿಭೆಯನ್ನು ಗುರುತಿಸುವ ಕೆಲಸ ಆಗಬೇಕಿದೆ ಎಂದರು. ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಮಾಲತೇಶ ಕರಾರಿ ವಹಿಸಿದ್ದರು. ಅತಿಥಿಗಳಾಗಿ ಗ್ರಾಪಂ ಸದಸ್ಯ ಕೃಷ್ಣಪ್ಪ ಮೈದೂರ, ಜಿ. ಮಲ್ಲಪ್ಪ, ಮಾಲತೇಶ ಸೊಪ್ಪಿನ, ಎಚ್.ಎಂ. ಬಟ್ಟೂರ, ಇತರರು ಉಪಸ್ಥಿತರಿದ್ದರು. ಚೈತನ್ಯ ಸಂಸ್ಥೆಯ ಮೇಲ್ವಿಚಾರಕಿ ಶೋಭಾ ಕುಂಬಾರ ಪ್ರಾರ್ಥಿಸಿದರು. ವೀರಭದ್ರಯ್ಯ ಕುಲಕರ್ಣಿ ಸ್ವಾಗತಿಸಿದರು. ಇಮಾಮಸಾಬ ನಿರ್ವಹಿಸಿದರು. ಶೈನಾಜ ಕಿಟ್ಟಿ ವಂದಿಸಿದರು. ತಾಲೂಕಿನ ಆಯ್ದ ಹಳ್ಳಿಗಳಿಂದ ಇನ್ನೂರಕ್ಕೂ ಹೆಚ್ಚು ರೆಡ್ ರಿಬ್ಬನ್ ಕ್ಲಬ್ ಸದಸ್ಯರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement