ರಾಣಿಬೆನ್ನೂರು: ಶೇ. 50ರಷ್ಟು ಮತದಾನ
ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಮಾ.7
ನಗರಸಭೆಯ 31 ವಾರ್ಡ್ಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಶೇ. 50ರಷ್ಟು ಮತದಾನವಾಗಿದೆ. ಪ್ರಸ್ತುತ ಸ್ಥಳೀಯ ಸಂಸ್ಥೆ ಚುನಾವಣೆ ಶಾಂತಿಯಿಂದ ಜರುಗಿದ್ದು, ಮತದಾನ ಕಾರ್ಯಕ್ಕೆ ಸಹಕರಿಸಿದ ಸಾರ್ವಜನಿಕರು, ಮತದಾರರು, ಪೊಲೀಸ್ ಹಾಗೂ ಹೋಂ ಗಾರ್ಡ್ಸ್ ಸಿಬ್ಬಂದಿಗಳಿಗೆ ಜಿಲ್ಲಾಡಳಿತದ ಪರ ಅಭಿನಂದನೆಗಳನ್ನು ತಹಸೀಲ್ದಾರ್ ಮಹೇಶಕುಮಾರ ತಿಳಿಸಿದ್ದಾರೆ.
ಮತದಾನಕ್ಕಾಗಿ 31 ವಾರ್ಡ್ಗಳ ವ್ಯಾಪ್ತಿಯಲ್ಲಿ ತೆರೆಯಲಾಗಿದ್ದ ಎಲ್ಲ 72 ಮತಗಟ್ಟೆಗಳಲ್ಲಿ ಶಾಂತ ರೀತಿಯಿಂದ ಮತದಾನ ಕಾರ್ಯ ನಡೆದಿದ್ದು, ಯಾವುದೆ ಗೊಂದಲ-ಗಲಾಟೆಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸಲಾಗಿದೆ. ಅಲ್ಲದೇ ವಿವಿಧ ಪಕ್ಷಗಳ ಅಭ್ಯರ್ಥಿಗಳು, ಬೆಂಬಲಿಗರು ಉತ್ತಮ ಸಹಕಾರ ನೀಡಿದ್ದಾರೆ ಎಂದು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.