ಇಂದು ಬ್ಯಾಡಗಿಗೆ ಸತೀಶ ಜಾರಕಿಹೊಳಿ
ಬ್ಯಾಡಗಿ: ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಮಾ. 10ರಂದು ಮಧ್ಯಾಹ್ನ 2ಕ್ಕೆ ಪಟ್ಟಣಕ್ಕೆ ಆಗಮಿಸಲಿದ್ದು, ಸ್ಥಳಿಯ ಶಿಕ್ಷಕರ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ತಾಲೂಕು ವಾಲ್ಮೀಕಿ-ನಾಯಕ ಸಮಾಜದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೆಪಿಸಿಸಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯಾಧ್ಯಕ್ಷ ಟಿ. ಈಶ್ವರಪ್ಪ, ರಾಜ್ಯಕಾರ್ಯದರ್ಶಿ ಪ್ರಕಾಶ ಹಾದಿಮನಿ, ರಾಣೇಬೆನ್ನೂರು ಎಪಿಎಂಸಿ ಅಧ್ಯಕ್ಷ ಸಣ್ಣ ತಮ್ಮಣ್ಣ ಬಾರ್ಕಿ, ಜಿಲ್ಲಾ ವಾಲ್ಮೀಕಿ ಮಹಾಸಭಾದ ಅಧ್ಯಕ್ಷ ಬಸವರಾಜ ಹಾದಿಮನಿ, ಕಾರ್ಯದರ್ಶಿ ಕಳ್ಳಿಮನಿ, ಜಿಲ್ಲಾ ವಾಲ್ಮೀಕಿ ಯುವಸೇನೆ ಅಧ್ಯಕ್ಷ ಬಸವರಾಜ ಸೇರಿದಂತೆ ಇನ್ನಿತರ ನಾಯಕರು ಭಾಗವಹಿಸಲಿದ್ದು, ತಾಲೂಕಿನ ವಾಲ್ಮೀಕಿ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬೇಕು ಎಂದು ತಾಲೂಕು ಪಂಚಾಯ್ತಿ ಮಾಜಿ ಸದಸ್ಯ ಚಂದ್ರಣ್ಣ ಸೊಟ್ಟಮ್ಮನವರ ವಿನಂತಿಸಿದರು.
ಇಂದು ಸವಾಲ್-ಜವಾಬ್ ಭಜನೆ ಸ್ಪರ್ಧೆ
ಹಾನಗಲ್ಲ: ಪಟ್ಟಣದ ಆನಂದೇಶ್ವರ ದೇವಸ್ಥಾನದಲ್ಲಿ ಮಾ. 10ರಂದು ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳ ಸಾನ್ನಿಧ್ಯದಲ್ಲಿ ಮಹಾಶಿವರಾತ್ರಿ ಕಾರ್ಯಕ್ರಮ ಹಾಗೂ ಸವಾಲ್-ಜವಾಬ್ ಭಜನಾ ಸ್ಪರ್ಧೆ ಜರುಗಲಿದೆ. ಹಾನಗಲ್ಲ ನಗರದ ಹಳೇ ಬಸ್ ನಿಲ್ದಾಣದ ಬಳಿ ಇರುವ ಆನಂದೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ ಆನಂದೇಶ್ವರ ದೇವರಿಗೆ ಕ್ಷೀರಾಭಿಷೇಕ, ರುದ್ರಾಭಿಷೇಕ, ಮಹಾಪೂಜೆ ನಡೆಯಲಿದೆ. ಗಂಗಾಧರಶಾಸ್ತ್ರೀ ಕಾಶೀಕರ ಇದರ ನೇತೃತ್ವ ವಹಿಸುವರು. ಸಂಜೆ 5 ಗಂಟೆಗೆ ಶಿವರಾತ್ರಿ ನಿಮಿತ್ತ ಆನಂದೇಶ್ವರ ಭವ್ಯ ರಥೋತ್ಸವ ವಿವಿಧ ವಾದ್ಯ ವೈಭವಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ರಾತ್ರಿ 9 ಗಂಟೆಗೆ ವಿವಿಧ ಭಜನಾ ಸಂಘಗಳಿಂದ ಸವಾಲ್-ಜವಾಬ್ ಭಜನಾ ಸ್ಪರ್ಧೆ ನಡೆಯಲಿದೆ. ಶಿಗ್ಗಾಂವಿ ತಾಲೂಕಿನ ಮಮದಾಪುರ ತಾಂಡಾ, ಸೇವಾಲಾಲ್ ಭಜನಾ ಸಂಘ ಹಾಗೂ ಸವಣೂರು ತಾಲೂಕಿನ ಬಡ್ನಿಯ ಮಾರುತಿ ಭಜನಾ ಸಂಘ ಸವಾಲ್-ಜವಾಬ್ ಭಜನಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವು ಎಂದು ದೇವಸ್ಥಾನ ಸಮಿತಿಯ ಪ್ರಕಟಣೆತಿಳಿಸಿದೆ.
ಬ್ಯಾಡಗಿ: ಜೀವನದಲ್ಲಿ ಜಿಗುಪ್ಸೆಗೊಂಡ ಮನೆಯಲ್ಲಿಯೇ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಶನಿವಾರ ಸಂಜೆ ತಾಲೂಕಿನ ಖುರ್ದಕೋಡಿಹಳ್ಳಿ ಗ್ರಾಮದಲ್ಲಿ ಜರುಗಿದೆ.
ಸುರೇಶ ಶಿವಪ್ಪ ಪೂಜಾರ (50) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದು, ಬಹು ದಿನದಿಂದ ಮದ್ಯ ವ್ಯಸನಿಯಾಗಿದ್ದ ಎಂದು ತಿಳಿದು ಬಂದಿದೆ. ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕ್ರಿಮಿನಾಶಕ ಸೇವಿಸಿದ್ದು, ನೋವಿನಿಂದ ಚೀರಾಡುತ್ತಿದ್ದ ಈತನ ಧ್ವನಿ ಕೇಳಿ ಅಕ್ಕಪಕ್ಕದವರು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರು ಎಳೆದಿದ್ದಾನೆ. ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.