ಹಿರೇಕೆರೂರು ಪಪಂ: ಕೆಜೆಪಿಗೆ ಮುನ್ನಡೆ
ಹಿರೇಕೆರೂರು: ಹಿರೇಕೆರೂರು ಪಟ್ಟಣ ಪಂಚಾಯತ್ನ 16 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷ ಮಾಜಿ ಶಾಸಕ ಯು.ಬಿ. ಬಣಕಾರ ನೇತೃತ್ವದಲ್ಲಿ 7 ಕಡೆ ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ. ಇದು ಕೆಜೆಪಿ ಕಾರ್ಯಕರ್ತರಲ್ಲಿ ಹರ್ಷ ಮೂಡಿಸಿದೆ. ಗಣ್ಯಾತಿಗಣ್ಯರು ಬಂದು ಪ್ರಚಾರ ಮಾಡಿದರೂ ಬಿಜೆಪಿ ಸೊನ್ನೆ ಸುತ್ತಿದೆ. ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್ ಕೇವಲ 4 ವಾರ್ಡ್ಗಳಲ್ಲಿ ಗೆಲವು ಸಾಧಿಸಿ 2ನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ. ಜೆಡಿಎಸ್ ಕೇವಲ 2 ಸ್ಥಾನ ಪಡೆದಿದೆ. ಬಿಎಸ್ಸಾರ್ ಒಂದು ಸ್ಥಾನ ಗಳಿಸಿ ಖಾತೆ ತೆರೆದಿದೆ. ಸ್ವ ಪ್ರಯತ್ನದಿಂದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವಿನ ನಗೆ ಮೂಡಿಸಿ ಅಚ್ಚರಿ ಹುಟ್ಟಿಸಿದ್ದಾರೆ. ಪಕ್ಷೇತರರ ಬೆಂಬಲ ಪಡೆಯುವ ಮೂಲಕ ಆಡಳಿತ ನಡೆಸಲು ಕೆಜೆಪಿ ಸಜ್ಜಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.