ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಶಿಕ್ಷಕರ ಪ್ರತಿಭಟನೆ

Lingaraj Badiger
Updated On : 14 Mar 2013, 11:36 am

ಹಾನಗಲ್ಲ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ವೇತನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಬುಧವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ತಾಲೂಕಿನ 7 ಅನುದಾನಿತ ಪ್ರಾಥಮಿಕ ಶಾಲೆಗಳ ಸುಮಾರು 54 ಶಿಕ್ಷಕರ ವೇತನವನ್ನು ಕಳೆದ ಡಿಸೆಂಬರ್‌ನಿಂದ ಬಿಡುಗಡೆಗೊಳಿಸಿಲ್ಲ. ರಾಜ್ಯ ಸರ್ಕಾರ ಅನುದಾನ ಬಿಡುಗಡೆಗೊಳಿಸಿದ್ದರೂ ಸಹ ಜಿಪಂ ಅಧಿಕಾರಿಗಳು ಅನವಶ್ಯಕ ವಿಳಂಬ ಧೋರಣೆ ತೋರುತ್ತಿದ್ದಾರೆ. 4ತಿಂಗಳುಗಳಿಂದ ವೇತನವಿಲ್ಲದೇ ಶಿಕ್ಷಕರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಸಂಬಂಧಿಸಿದ ಇಲಾಖೆಗಳಿಗೆ ಹಣ ಬಿಡುಗಡೆಗೊಳಿಸುವಂತೆ ಸೂಚಿಸಬೇಕೆಂದು ಮನವಿಯಲ್ಲಿ ಕೋರಿದ್ದಾರೆ.
ಅನುದಾನಿತ ಶಾಲೆಗಳ ಕುರಿತು ತಾರತಮ್ಯ ಧೋರಣೆ ತಾಳಿರುವ ಅಧಿಕಾರಿಗಳು ವೇತನ ಬಿಡುಗಡೆಗೆ ವಿಳಂಬ ನೀತಿ ಮುಂದುವರಿಸಿದರೆ ಶಿಕ್ಷಕರು ತಾಳ್ಮೆ ಕಳೆದುಕೊಳ್ಳಬೇಕಾಗುತ್ತದೆ. ಒಂದು ವಾರದೊಳಗೆ ವೇತನ ಬಿಡುಗಡೆಗೊಳಿಸದಿದ್ದಲ್ಲಿ ಶಿಕ್ಷಕರು ಕಪ್ಪುಬಟ್ಟೆ ಧರಿಸಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಎದುರು ಧರಣಿ ನಡೆಸುವುದಾಗಿ ಮನವಿಯಲ್ಲಿ ಎಚ್ಚರಿಸಿದ್ದಾರೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಅನುದಾನಿತ ಶಾಲಾ ಶಿಕ್ಷಕರು ಮನವಿ ಅರ್ಪಿಸಿದ್ದಾರೆ. ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಜೆ.ಎಂ. ಅಂಗಡಿ ಹಾಗೂ ಹಾನಗಲ್ಲಿನ ನವೀನ ವಿದ್ಯಾ ಪ್ರಾಥಮಿಕ ಶಾಲೆ, ಸೇಂಟ್ ಜೋಸೆಫ್ ಪ್ರಾಥಮಿಕ ಶಾಲೆ, ಜನತಾ ಮಾದರಿ ಪ್ರಾಥಮಿಕ ಶಾಲೆ, ಅಕ್ಕಿಆಲೂರಿನ ಜ್ಞಾನಭಾರತಿ ಪ್ರಾಥಮಿಕ ಶಾಲೆ ಶಿಕ್ಷಕರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement