ಇಂದು ಕಸಾಪ ದತ್ತಿ ಉಪನ್ಯಾಸ
ಹಿರೇಕೆರೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಿರೇಕೆರೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕ ಶಿಕ್ಷಕಿಯರ ಸಹಕಾರ ಪತ್ತಿನ ಸಂಘ ವತಿಯಿಂದ ದತ್ತಿ ಉಪನ್ಯಾಸ ಮಾ. 17ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಗುರಭವನದಲ್ಲಿ ಜರುಗಲಿದೆ.
ರಟ್ಟಿಹಳ್ಳಿ ಕಬ್ಬಿಣ ಕಂಥಿಮಠದ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಜಿ.ಬಿ. ಮಾಸಣಗಿ ಅದ್ಯಕ್ಷತೆ ವಹಿಸುವರು. ತಾಲೂಕು ಅಧ್ಯಕ್ಷ ಎಸ್.ಪಿ. ಗೌಡರ ಪ್ರಾಸ್ತಾವಿಕ ಮಾತನಾಡುವರು. ಆರ್ಥಿಕ ಸಂಕಷ್ಟದಲ್ಲಿರುವ ಸಹಕಾರಿ ಸಂಘಗಳ ಪುನಶ್ಚೇತನ ಕುರಿತು ನಿವೃತ್ತ ಸಹಕಾರ ಅಭಿವೃದ್ಧಿ ಅಧಿಕಾರಿ ಸಿ. ವಿಶ್ವನಾಥಯ್ಯ ದತ್ತಿ ಉಪನ್ಯಾಸ ನೀಡುವರು.
ಕಸಾಪ ಗೌರವಾಧ್ಯಕ್ಷ ಮಹೇಂದ್ರ ಬಡಳ್ಳಿ, ಶಿಕ್ಷಕರ ಸಹಕಾರ ಪತ್ತಿನ ಸಂಘದ ಅಧ್ಯಕ್ಷ ಎಸ್.ಎಂ. ಕ್ವಾರಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ.ಪಿ. ಬಿದರಿ, ಕಸಾಪ ಜಿಲ್ಲಾ ಕೋಶಾದ್ಯಕ್ಷ ಎಂ.ಎಂ. ಪಾಟೀಲ, ಅಶೋಕ ಗೊಲ್ಲರ, ರಾಘವೇಂದ್ರ ಹಂಚಿನಮನಿ, ಪ್ರಭು ಹಲಗೇರಿ ಪಾಲ್ಗೊಳ್ಳುವರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.