ಒಗ್ಗಟ್ಟಿನಿಂದ ಪಕ್ಷದ ಗೆಲವಿಗೆ ಶ್ರಮಿಸಿ
ಹಾನಗಲ್ಲ: ಕಾಂಗ್ರೆಸ್ಗೆ ಮಾತ್ರ ಸಾಮಾಜಿಕ ನ್ಯಾಯ ಒದಗಿಸುವ ಬದ್ಧತೆಯಿದ್ದು, ಆಂತರಿಕ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದು, ಒಗ್ಗಟ್ಟಿನಿಂದ ಪಕ್ಷದ ಗೆಲವಿಗೆ ಶ್ರಮಿಸಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಕರೆ ನೀಡಿದರು.
ಹಾನಗಲ್ಲಿನಲ್ಲಿ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ವರ್ಗ ಘಟಕದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಭಿನ್ನಾಭಿಪ್ರಾಯ ಬಿಡಿ: ನಮ್ಮೊಳಗಿನ ಕಚ್ಚಾಟದಿಂದಾಗಿ ಕಾಂಗ್ರೆಸ್ ಸೋಲುಂಡಿದೆ. ಪ್ರಸಕ್ತ ಎಚ್ಚೆತ್ತುಕೊಳ್ಳಬೇಕಾಗಿದೆ. ಭಿನ್ನಾಭಿಪ್ರಾಯಗಳನ್ನು ದೂರವಿರಿಸಿ ಈ ಬಾರಿ ಗೆಲ್ಲುವ ಛಲ ತೊಡಬೇಕು. ಬಿಜೆಪಿ ಆಡಳಿತದಲ್ಲಿ ಜನ ರೋಸಿ ಹೋಗಿದ್ದಾರೆ. ರಾಜ್ಯದ ಜನತೆ ಕಾಂಗ್ರೆಸ್ ಆಡಳಿತ ಬಯಸುತ್ತಿದ್ದಾರೆ ಎಂದರು.
ಒಗ್ಗಟ್ಟಿನಿಂದ ಬಹುಮತದ ಸರ್ಕಾರ: ಹಾನಗಲ್ಲ ತಾಲೂಕಿನಲ್ಲಿ ಹಲವರು ಕಾಂಗ್ರೆಸ್ ಅಭ್ಯರ್ಥಿಯಾಗಲು ಪೈಪೋಟಿ ಇದೆ. ಆದರೆ, ಯಾರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಲಾಗುವುದೋ ಅವರನ್ನು ಗೆಲ್ಲಿಸಲು ಸಿದ್ಧರಾಗಿ ಎಂದ ಅವರು, ಕಾಂಗ್ರೆಸ್ ಈ ಬಾರಿ ಒಗ್ಗಟ್ಟಿನ ಪ್ರದರ್ಶನ ನೀಡಿದರೆ ಮಾತ್ರ ರಾಜ್ಯದಲ್ಲಿ ಬಹುಮತದ ಸರ್ಕಾರ ಬರಲು ಸಾಧ್ಯ. ಈ ಮೂಲಕ ರಾಜ್ಯದ ಜನತೆಗೆ ನ್ಯಾಯ ಒದಗಿಸಲು ಸಾಧ್ಯ ಎಂದರು.
ಕಾಂಗ್ರೆಸ್ನ ಪರಿಶಿಷ್ಟ ಸಮುದಾಯ ಘಟಕದ ರಾಜ್ಯಾಧ್ಯಕ್ಷ ಟಿ. ಈಶ್ವರ ಮಾತನಾಡಿ, ಇಡೀ ರಾಜ್ಯ ಸುತ್ತಿ ಪ.ಪಂಗಡದ ಜನತೆ ಒಗ್ಗಟ್ಟುಗೊಳಿಸಲಾಗುತ್ತಿದೆ. ಈ ಬಾರಿ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದ ಅವರು, ಸುಳ್ಳು ಆಶ್ವಾಸನೆಗಳನ್ನು ನೀಡಿ ಜನತೆಗೆ ಮೋಸಗೊಳಿಸಿದ ಬಿಜೆಪಿಗೆ ತಕ್ಕಪಾಠ ಕಲಿಸಿ, ಈ ಬಾರಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿ ಎಂದರು.
ಜನ ಬೇಸತ್ತಿದ್ದಾರೆ: ವಿಧಾನಸಭೆ ಮಾಜಿ ಉಪ ಸಭಾಪತಿ ಜಿಲ್ಲಾಧ್ಯಕ್ಷ ಮನೋಹರ ತಹಸೀಲ್ದಾರ್ ಮಾತನಾಡಿ, ಹಿಂದುಳಿದ ವರ್ಗದ ಸಮುದಾಯ ಕಾಂಗ್ರೆಸ್ ಪಕ್ಷದ ಮುಖ್ಯವಾಹಿನಿಯಲ್ಲಿ ಬರಬೇಕು. ಬಿಜೆಪಿ ಅಧಿಕಾರದಲ್ಲಿ ರಾಜಕೀಯ ಗೊಂದಲ, ದ್ವಂದ್ವ ನೀತಿಯಿಂದ ಜನ ಬೇಸತ್ತಿದ್ದಾರೆ ಎಂದರು.
ಕೆಪಿಸಿಸಿ ಸದಸ್ಯ ಸತೀಶ ದೇಶಪಾಂಡೆ ಮಾತನಾಡಿದರು. ಮಾಜಿ ಸಚಿವ ಬಸವರಾಜ ಶಿವಣ್ಣನವರ, ಮಾಜಿ ಶಾಸಕ ರುದ್ರಪ್ಪ ಲಮಾಣಿ, ತಾವರಗಿ ಶಿವಕುಮಾರ, ಕೆಪಿಸಿಸಿ ಸದಸ್ಯ ರಾಜಶೇಖರ ಸಾಲಿಮಠ, ಜಿ.ಟಿ. ಚಂದ್ರಶೇಖರಪ್ಪ, ಜಿಪಂ ಮಾಜಿ ಉಪಾಧ್ಯಕ್ಷ ಜಿ.ಎಸ್. ಗಂಟೇರ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಜಿಪಂ ಸದಸ್ಯ ಮಹದೇವಪ್ಪ ಬಾಗಸರ, ವೈ.ಎಫ್. ಕಿತ್ತೂರು, ಮಲ್ಲನಗೌಡ ಪಾಟೀಲ, ಸಿ.ಎಸ್. ಬಡಿಗೇರ, ಕೆ.ಎಲ್. ದೇಶಪಾಂಡೆ, ಸಿ.ಎಫ್. ಮುದಕಣ್ಣನವರ, ತಾಪಂ ಸದಸ್ಯ ಮಧು ಪಾಣಿಗಟ್ಟಿ, ಸುರೇಶ ನೆರಕಿಮನಿ ಇನ್ನಿತರರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.