ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ನೈತಿಕ ಮಟ್ಟ ಕುಸಿತವೇ ಧಾರ್ಮಿಕ ವೈಫಲ್ಯ

Parashurama
Updated On : 17 Mar 2013, 12:02 pm

ಹಾನಗಲ್ಲ: ಎಲ್ಲ ಧರ್ಮಗಳು ಮನುಷ್ಯನಾಗಿ ಬದುಕುವ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತವೆ. ಹಿಂಸೆ ಪ್ರತಿ ಪಾದಿಸುವುದಿಲ್ಲ. ಭಾರತ ಸಾಕ್ಷರತೆ, ಆರೋಗ್ಯ, ಆರ್ಥಿಕ, ಸಾಮಾಜಿಕ ಪ್ರಗತಿ ಹೊಂದಿದ್ದರೂ, ನೈತಿಕ ಮಟ್ಟ ಕುಸಿದಿರುವುದಕ್ಕೆ ಧಾರ್ಮಿಕ ಪ್ರತಿಪಾದನೆಯಲ್ಲಿನ ವೈಫಲ್ಯವೇ ಕಾರಣ ಎಂದು ಮಾಜಿ ಸಚಿವ ಸಿ.ಎಂ. ಉದಾಸಿ ಅಭಿಪ್ರಾಯಪಟ್ಟರು.
ಶನಿವಾರ ಪಟ್ಟಣದ ಶ್ರೀ ಕುಮಾರೇಶ್ವರ ಕಲಾ-ವಾಣಿಜ್ಯ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಪ್ರವಾದಿ ಮಹ್ಮದ ಪೈಗಂಬರರ ಜನ್ಮದಿನಾಚರಣೆಯ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಇಸ್ಲಾಂ ಧರ್ಮ ಸತ್ಯ ಮತ್ತು ಶಾಂತಿಯ ಪ್ರತೀಕವಾಗಿದೆ. ಪ್ರಾರ್ಥನೆ, ಉಪವಾಸ, ಧಾರ್ಮಿಕ ದೇಣಿಗೆ ಮನು ಷ್ಯನನ್ನು ಸಂಸ್ಕಾರಗೊಳಿಸುತ್ತದೆ ಎಂದ ಅವರು, ಇಂದಿನ ಪ್ರಚಲಿತ ವಿದ್ಯಮಾನಗಳ ಅರಿವಿಗಾಗಿ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜನತಾ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಪಿ.ವೈ. ಗುಡಗುಡಿ ಮಾತನಾಡಿ, ಇಂದಿನ ಕಲುಷಿತ, ಗೊಂದಲಮಯ ರಾಜಕೀಯ ವಾತಾವರಣದಲ್ಲಿ ಧರ್ಮಗಳು ಮಾತ್ರ ಸಮಾಜವನ್ನು ರಕ್ಷಿಸುವ ಸಾಧನವಾಗಬೇಕಿದೆ ಎಂದರು.  ಪ್ರಾಚಾರ್ಯ ಎನ್.ಬಿ. ಬಣಕಾರ ಪ್ರಾಸ್ತಾವಿಕ ಮಾತನಾಡಿದರು. ಜನತಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ.ಎಸ್. ಬಳ್ಳಾರಿ ಅಧ್ಯಕ್ಷತೆ ವಹಿಸಿದ್ದರು. ಮಹದೇವ ಬೆಟಗೇರಿ, ಟಿಪ್ಪು ಸಲ್ತಾನ್ ನಾಯಕವಾಡಿ, ಪುರಸಭೆ ಸದಸ್ಯ ಕಲ್ಯಾಣಕುಮಾರ ಶೆಟ್ಟರ್ ಮಾತನಾಡಿದರು. ಇದೇ ಸಂದರ್ಭ ಮಾಜಿ ಸಚಿವ ಸಿ.ಎಂ. ಉದಾಸಿ, ಎ.ಎಸ್. ಬಳ್ಳಾರಿ, ಪ್ರಾಚಾರ್ಯ ಎನ್.ಬಿ. ಬಣಕಾರ, ಕಲ್ಯಾಣಕುಮಾರ ಶೆಟ್ಟರ್ ಹಾಗೂ ಪಿ.ವೈ. ಗುಡಗುಡಿ ಅವರನ್ನು ಸನ್ಮಾನಿಸಲಾಯಿತು. ಕಲಾಯಿಗಾರ ಪ್ರಾರ್ಥಿಸಿದರು. ಪೂಜಾ ಅಥಣಿ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments