ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಹಾವೇರಿ: ವಿಜ್ಞಾನ ಬರವಣಿಗೆ ತರಬೇತಿ ಶಿಬಿರ

Parashurama
Updated On : 17 Mar 2013, 11:51 am

ಹಾವೇರಿ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ರಾಜ್ಯದ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರಿಗೆ, ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳು, ವರದಿಗಾರರಿಗೆ ಜನಪ್ರಿಯ ವಿಜ್ಞಾನ ಬರವಣಿಗೆಯ ತರಬೇತಿ ಶಿಬಿರ ಹಮ್ಮಿಕೊಂಡಿದೆ.
ವಿಜ್ಞಾನ ಬರವಣಿಗೆಯಲ್ಲಿ ಆಸಕ್ತಿ ಇರುವ ಗ್ರಾಮೀಣ ಭಾಗದ ವಿಜ್ಞಾನ ಶಿಕ್ಷಕರು, ಯುವ ಪತ್ರಿಕಾ ವರದಿಗಾರರು, ಚಿತ್ರ ನಿರೂಪಕರು, ರೇಡಿಯೋ ಭಾಷಣಕಾರರು ಮತ್ತಿತರ ಆಸಕ್ತರು ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರ 5 ದಿನಗಳ ಕಾಲ ಏಪ್ರಿಲ್ ಒಂದು ಅಥವಾ ಎರಡನೇ ವಾರದಲ್ಲಿ ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯ ಆವರಣದಲ್ಲಿ ಜರುಗಲಿದೆ. ಶಿಬಿರಾರ್ಥಿಗಳಾಗಿ ಭಾಗವಹಿಸಲಿಚ್ಛಿಸುವವರು ವಿಜ್ಞಾನ ಸಂವಹನದಲ್ಲಿ ವಿಶೇಷ ಆಸಕ್ತಿ ಹೊಂದಿರಬೇಕು.
ಶಿಬಿರದಲ್ಲಿ ಭಾಗವಹಿಸುವವರು ವ್ಯಕ್ತಿಗತ ವಿವರಗಳು, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಒಂದು ಸ್ವ-ರಚಿತ ಲೇಖನವನ್ನು ಅರ್ಜಿಯೊಂದಿಗೆ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಭವನ, ನಂ. 24/2, 21ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು -560 070 ಈ ವಿಳಾಸಕ್ಕೆ ಮಾ. 25ರೊಳಗಾಗಿ ತಲುಪುವಂತೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ರಾಜ್ಯ ಸಂಯೋಜಕ ಪ್ರೊ. ಎಸ್.ವಿ. ಸಂಕನೂರ ಮೊ- 9448301983 ಇಲ್ಲಿಗೆ ಸಂಪರ್ಕಿಸಬಹುದು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಈ ಹಿಂದೆ ಸಂಘಟಿಸಿದ್ದ ಲೇಖಕರ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳು ಮರು ಅರ್ಜಿ ಸಲ್ಲಿಸುವಂತಿಲ್ಲ. ಸ್ವೀಕೃತ ಅರ್ಜಿಗಳನ್ನು ರಾಜ್ಯ ಪರಿಣಿತರ ಸಮಿತಿಯಿಂದ ಪರಿಶೀಲನೆಗೆ ಒಳಪಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವಿಜ್ಞಾನ ಪರಿಷತ್ತಿನಿಂದ ಉಚಿತ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗುವುದು ಹಾಗೂ ಎರಡನೇ ದರ್ಜೆ ರೈಲು ಮತ್ತು ಸಾಮಾನ್ಯ ಬಸ್ಸಿನ ಪ್ರಯಾಣ ಭತ್ಯೆ ನೀಡಲಾಗುವುದೆಂದು ಸಂಘಟಕರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments