ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಅಭಿವೃದ್ಧಿಗೆ ಶಿಕ್ಷಣ ಅವಶ್ಯ

Mainashree
Updated On : 19 Mar 2013, 11:05 am

ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಮಾ. 18
ದೇಶದ ಸಮಗ್ರ ಅಭಿವೃದ್ಧಿಗೆ ಇಂದಿನ ಯುವಕರಿಗೆ ಮೌಲ್ಯಾಧಾರಿತ ಹಾಗೂ ಸಾಮಾಜಿಕ ಶಿಕ್ಷಣದ ಆವಶ್ಯಕತೆ ಇದೆ ಎಂದು ಮಾಜಿ ಸಂಸದ ಮಂಜುನಾಥ ಕುನ್ನೂರ ಹೇಳಿದರು.
ಇಲ್ಲಿನ ಚನ್ನಪ್ಪ ಕುನ್ನೂರ ಸಮೂಹ ಶಿಕ್ಷಣ ಸಂಸ್ಥೆಗಳ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವಿಕರಿಸಿ ಮಾತನಾಡಿದರು.
ಶಿಕ್ಷಣ ಸಂಸ್ಥೆಗಳನ್ನು ಕಟ್ಟುವುದು ಹಾಗೂ ಅವುಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುವುದು ಕಷ್ಟದ ಕೆಲಸ. ಇಂಥ ಕೆಲಸದಲ್ಲಿ ಆಡಳಿತ ಮಂಡಳಿ ಜವಾಬ್ದಾರಿ ಜೊತೆಗೆ ಸಿಬ್ಬಂದಿ ಹೊಣೆಗಾರಿಕೆ ಮಹತ್ವದ್ದಾಗಿದೆ. ಇಂಥ ಹೊಣೆಯನ್ನರಿತು ಶಿಕ್ಷಕರು ಕೆಲಸ ಮಾಡಬೇಕೆಂದು ಸಲಹೆ ಮಾಡಿದರು.
ಶಿಗ್ಗಾಂವಿಯಲ್ಲಿ ಮೆಡಿಕಲ್ ಕಾಲೇಜು, ಎಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸುವ ತಮ್ಮ ಮನದಿಚ್ಛೆಯನ್ನು ವ್ಯಕ್ತಪಡಿಸಿದ ಅವರು, ಮುಂಬರುವ ದಿನಗಳಲ್ಲಿ ಇದಕ್ಕೆ ಯತ್ನಿಸುವುದಾಗಿ ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ರಾಜು ಕುನ್ನೂರ ಮಾತನಾಡಿದರು. ಸಂಸ್ಥೆ ಅಧ್ಯಕ್ಷೆ ಸ್ನೇಹಲತಾ ಕುನ್ನೂರ, ಎಚ್.ಎಸ್. ಹಲಸೂರು, ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ, ವೀರಣ್ಣ ಬಡ್ಡಿ, ಹುಬ್ಬಳ್ಳಿ ಧಾರವಾಡ ಬ್ಲಾಕ್ ಕಾಂಗ್ರೆಸ್ ಯುವ ಅಧ್ಯಕ್ಷ ಆರೀಫ್ ಭದ್ರಾಪುರ, ದತ್ತಾತ್ರೇಯ ಕೊಪ್ಪಳ, ಮಧುಮತಿ ಇದ್ದರು. ಡಿಇಡಿ ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಕೆ.ಎಸ್. ಬರದೇಲಿ ಸ್ವಾಗತಿಸಿ, ಜಿ.ಎಂ. ಅರಗೋಳ ನಿರ್ವಹಿಸಿದರು. ಸಿ.ಟಿ. ಪಾಟೀಲ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement