ಇಂದಿನಿಂದ ಲೋಕಾಯುಕ್ತ ಅಹವಾಲು ಸ್ವೀಕಾರ
ಹಾವೇರಿ: ಹಾವೇರಿಯ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯ 6 ತಾಲೂಕುಗಳಲ್ಲಿ ಮಾ. 20, 21 ಹಾಗೂ 22ರಂದು ಆಯಾ ತಾಲೂಕುಗಳ ಸರ್ಕಾರಿ ಕಚೇರಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರು ಸ್ವೀಕರಿಸಿ, ವಿಚಾರಣೆ ಕೈಗೊಳ್ಳಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಹಾವೇರಿ ವಿಭಾಗದ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಾ. 20ರಂದು ಬೆಳಗ್ಗೆ 10ರಿಂದ 1 ಗಂಟೆವರೆಗೆ ರಾಣಿಬೆನ್ನೂರು ಪ್ರವಾಸಿ ಮಂದಿರದಲ್ಲಿ ಮತ್ತು ಮಧ್ಯಾಹ್ನ 2ರಿಂದ 5ರ ವರೆಗೆ ಬ್ಯಾಡಗಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ದೂರು ಹಾಗೂ ಅಹವಾಲುಗಳನ್ನು ಸ್ವೀಕರಿಸುವರು. 21ರಂದು ಬೆಳಗ್ಗೆ 10ರಿಂದ 1ರ ವರೆಗೆ ಹಿರೇಕೆರೂರು ಪ್ರವಾಸಿ ಮಂದಿರದಲ್ಲಿ ಮತ್ತು ಮಧ್ಯಾಹ್ನ 3ರಿಂದ 5ರ ವರೆಗೆ ಹಾನಗಲ್ಲ ಪ್ರವಾಸಿ ಮಂದಿರದಲ್ಲಿ ಮತ್ತು 22ರಂದು ಬೆಳಗ್ಗೆ 10ರಿಂದ 1ಗಂಟೆವರೆಗೆ ಸವಣೂರು ಪ್ರವಾಸಿ ಮಂದಿರದಲ್ಲಿ ಮತ್ತು ಮಧ್ಯಾಹ್ನ 2ರಿಂದ 5ರ ವರೆಗೆ ಶಿಗ್ಗಾಂವಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ದೂರು ಹಾಗೂ ಅಹವಾಲುಗಳನ್ನು ಸ್ವೀಕರಿಸುವರು.
ಆಯಾ ದಿನಗಳಂದು ತಮ್ಮ ದೂರು ದುಮ್ಮಾನಗಳನ್ನು ನಿವೇದಿಸಿಕೊಳ್ಳಬಹುದಾಗಿದೆ ಎಂದು ಹಾವೇರಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ದೂರುಗಳಿದ್ದಲ್ಲಿ ಹಾವೇರಿ ಜಿಲ್ಲಾ ಆರಕ್ಷಕ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು, ಲೋಕಾಯುಕ್ತ ಕಚೇರಿಗೆ ಪ್ರತಿದಿನ ಅರ್ಜಿ, ದೂರು ಸಲ್ಲಿಸಬಹುದಾಗಿದೆ.