ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ನೀರಿನ ಸಮಸ್ಯೆ ನೀಗಿಸಿ

Mainashree
Updated On : 21 Mar 2013, 11:39 am

ಹಾವೇರಿ: ಹಾವೇರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಜನತೆ ಪರದಾಡುತ್ತಿದ್ದಾರೆ. ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಜಿಲ್ಲಾಧಿಕಾರಿಗಳು ಕೂಡಲೇ ನಗರಸಭೆ ಸದಸ್ಯರ ಸಭೆ ಕರೆಯುವಂತೆ ನಗರಸಭೆಯ ನೂತನ ಸದಸ್ಯ ಐ.ಯು. ಪಠಾಣ ಒತ್ತಾಯಿಸಿದ್ದಾರೆ.
ನಗರಕ್ಕೆ ಕುಡಿಯುವ ನೀರು ಪೂರೈಸುವ ತುಂಗಭದ್ರಾ ಹಾಗೂ ವರದಾ ನದಿಗಳು ಬರಿದಾಗಿರುವ ಹಿನ್ನೆಲೆಯಲ್ಲಿ ನೀರಿನ ಅಭಾವ ಎದುರಾಗಿದೆ. ನಗರದಲ್ಲಿ ಕೆಲವು ಬಡಾವಣೆಗಳಲ್ಲಿ ಇರುವ ಬೋರ್‌ವೆಲ್‌ಗಳು ಕೆಟ್ಟು ಹೋಗಿವೆ. ಇನ್ನೂ ಕೆಲವು ಕೊಳವೆ ಬಾವಿಗಳಲ್ಲಿ ಅಂತರ್ಜಲ ಕುಸಿದಿದೆ. ಕೆಟ್ಟು ಹೋಗಿರುವ ಕೊಳವೆ ಬಾವಿಗಳನ್ನು ದುರಸ್ತಿ ಮಾಡಿಸುವಂತೆ ಮತ್ತು ಬಡಾವಣೆಗಳಲ್ಲಿ ಹೊಸ ಬೋರ್‌ವೆಲ್ ಕೊರೆಸುವಂತೆ ಆಗ್ರಹಿಸಿದ್ದಾರೆ.
ಈ ಕುರಿತಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, ನಗರದ 12ನೇ ವಾರ್ಡ್‌ನ ಶಿವಯೋಗೇಶ್ವರ ನಗರ, ಶಿವಬಸವ ನಗರ, ಕೋಲಕಾರ ಓಣಿ, ಹೊಸನಗರ, ಮುಲ್ಲಾನಕೇರಿ ಬಡಾವಣೆಗಳಲ್ಲಿ ಕೊಳವೆಬಾವಿ ನೀರಿನ ವ್ಯವಸ್ಥೆ ಇಲ್ಲದೆ ಜನತೆ ತತ್ತರಿಸಿದೆ. ಈ ಎಲ್ಲ ಬಡಾವಣೆಗಳ ಜನರು ಕೂಲಿ ಕಾರ್ಮಿಕರಾಗಿದ್ದು, ಕೆಲಸ ಬಿಟ್ಟು ನಿತ್ಯ ನೀರಿಗಾಗಿ ಅಲೆದಾಡುವ ಸ್ಥಿತಿ ಉಂಟಾಗಿದೆ. ಕೂಡಲೇ ತುರ್ತು ಕ್ರಮ ಜರುಗಿಸಬೇಕೆಂದು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement