ಲಾರಿ ಡಿಕ್ಕಿ: ಬೈಕ್ ಸವಾರ ಸಾವು
ಶಿಗ್ಗಾಂವಿ: ತಾಲೂಕಿನ ಬಂಕಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದು ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಮೃತನು ಬಂಕಾಪುರದ ನಿಂಗಪ್ಪ ಮಹಾದೇವಪ್ಪ ಹಳವಳ್ಳಿ (41). ಅಪಘಾತದ ಬಳಿಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ನಿಂಗಪ್ಪ ಮೃತಪಟ್ಟನೆಂದು ಕುಟುಂಬದ ಮೂಲಗಳು ತಿಳಿಸಿವೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.