ಇಂದು ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ
ಹಾವೇರಿ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಆಶ್ರಯದಲ್ಲಿ ಪರೀಕ್ಷಾ ಮೌಲ್ಯಮಾಪನ ವಿಧಾನ ದೈಹಿಕ ಶಿಕ್ಷಣ ಕುರಿತು ಕಾರ್ಯಾಗಾರ ಮಾ. 22ರ ಬೆಳಗ್ಗೆ 9.30ಕ್ಕೆ ಜಿಲ್ಲಾ ಗುರುಭವನದಲ್ಲಿ ಜರುಗಲಿದೆ.
ಡಯಟ್ ಪ್ರಾಚಾರ್ಯ ಎಂ.ಡಿ. ಬಳ್ಳಾರಿ ಕಾರ್ಯಾಗಾರ ಉದ್ಘಾಟಿಸುವರು. ದೈಹಿಕ ಶಿಕ್ಷಣ ಹೊಂಗನಸು ಎಂಬ ದೈಹಿಕ ಶಿಕ್ಷಣ ಶಿಕ್ಷಕರ ಮಾರ್ದದರ್ಶನ ಕೈಪಿಡಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಬಿ. ಕೊಡ್ಲಿ ಬಿಡುಗಡೆ ಮಾಡಲಿದ್ದಾರೆ. ಕಾರ್ಯಾಗಾರದಲ್ಲಿ ಭಾಗವಹಿಸುವ ಜಿಲ್ಲೆಯ ಎಲ್ಲ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಓಓಡಿ ಸೌಲಭ್ಯ ನೀಡಲಾಗುತ್ತದೆ ಎಂದು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಪಿ.ಜೆ. ಓಲೇಕಾರ, ಕಾರ್ಯದರ್ಶಿ ವಿನಾಯಕ ಗಡ್ಡದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.