ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗೆ ಸೂಚನೆ

Mainashree
Updated On : 22 Mar 2013, 10:45 am

ಹಾವೇರಿ: ತಾಲೂಕಿನ ಬೆಳವಿಗಿ ಸೇರಿದಂತೆ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕಲುಷಿತ ಕುಡಿಯುವ ನೀರಿನಿಂದ ವಾಂತಿ-ಭೇದಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ನೀರಿನ ಮೂಲಗಳ ಸ್ವಚ್ಛತೆ ಕಾಪಾಡುವ ಬಗ್ಗೆ ತಾಲೂಕುಗಳಲ್ಲಿರುವ ತನ್ನ ಉಪವಿಭಾಗೀಯ ಕಚೇರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತ ಶ್ರೀಕಾಂತ ಮೈಸೂರ ಸುತ್ತೋಲೆ ಹೊರಡಿಸಿ, ಪ್ರತಿ ತಿಂಗಳು ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಈ ಸಂಬಂಧ ನೀಡಲಾದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ತಿಳಿಸಿದ್ದಾರೆ. ಈ ಸುತ್ತೋಲೆಯಂತೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು, ಸದ್ಯದ ಹಾಗೂ ಬರುವ ಬೇಸಿಗೆ ಕಾಲದಲ್ಲಿ ತಮ್ಮ ತಮ್ಮ ತಾಲೂಕಿನ ಗ್ರಾಮಗಳಲ್ಲಿ ಎಲ್ಲೂ ಕುಡಿಯುವ ನೀರಿನ ಅಭಾವವಾಗದಂತೆ ಮುನ್ನೆಚ್ಚರಿಕೆ ವಹಿಸುವುದರ ಜೊತೆಗೆ, ನೀರು ಪೂರೈಕೆ ಮೂಲಗಳಿಂದ ಕಾಲಕಾಲಕ್ಕೆ ನೀರಿನ ಗುಣಮಟ್ಟದ ಮಾದರಿಯನ್ನು ಪ್ರಯೋಗಾಲದಲ್ಲಿ ಪರೀಕ್ಷೆಗೆ ಒಳಪಡಿಸಬೇಕು.
ಬೆಳವಿಗಿ ನೀರು ಯೋಗ್ಯ: ಹಾವೇರಿ ತಾಲೂಕಿನ ಬೆಳವಿಗಿಯಲ್ಲಿ ಕುಡಿವ ನೀರು ಕಲುಷಿತಗೊಂಡ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ  ಗ್ರಾಮದಲ್ಲಿ ನೀರು, ಕಿರು ನೀರು ಪೂರೈಕೆ ಘಟಕ ಮತ್ತು ಓವರ್ ಹೆಡ್ ಟ್ಯಾಂಕ್‌ಗಳ ನೀರನ್ನು ಸಂಗ್ರಹಿಸಿ, ರಾಸಾಯನಿಕ ವಿಶ್ಲೇಷಣೆಗೆ ಒಳಪಡಿಸಿ, ನೀರು ಕುಡಿಯಲು ಯೋಗ್ಯವಾಗಿದೆಯೆಂಬುದನ್ನು ಖಚಿತಪಡಿಸಿಕೊಂಡಿರುವುದಾಗಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಹಾವೇರಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಬಿ.ಆರ್. ದೇಶಪಾಂಡೆ ಸ್ಪಷ್ಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement