ಚುನಾವಣಾಧಿಕಾರಿಗಳ ನೇಮಕ
ಹಾವೇರಿ: ಮೇ 5ರಂದು ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಜರುಗಲಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ ಚುನಾವಣಾ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹಾವೇರಿ ವಿಧಾನಸಭಾ ಕ್ಷೇತ್ರಕ್ಕೆ ಹಾವೇರಿ ಉಪ ವಿಭಾಗಾಧಿಕಾರಿಗಳು, ಶಿಗ್ಗಾಂವಿ ಕ್ಷೇತ್ರಕ್ಕೆ ಸವಣೂರ ಉಪ ವಿಭಾಗಾಧಿಕಾರಿಗಳು, ಹಿರೇಕೆರೂರು ಕ್ಷೇತ್ರಕ್ಕೆ ಜಿಲ್ಲಾ ಗ್ರಾಮೀಣಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಬ್ಯಾಡಗಿ ಕ್ಷೇತ್ರಕ್ಕೆ ಜಿಪಂ ಉಪಕಾರ್ಯದರ್ಶಿಗಳು, ಹಾನಗಲ್ಲ ಕ್ಷೇತ್ರಕ್ಕೆ ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕರು ಹಾಗೂ ರಾಣಿಬೆನ್ನೂರು ಕ್ಷೇತ್ರಕ್ಕೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಚುನಾವಣಾಧಿಕಾರಿಗಳಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.