ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಅತಿಥಿ ಉಪನ್ಯಾಸಕರಿಗೆ ಸಂಭಾವನೆ ನೀಡಿ

Rashmi Kasaragodu
Updated On : 26 Mar 2013, 10:49 am

ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಮಾ. 25
ತಾಲೂಕಿನ ಗಂಜಿಗಟ್ಟಿಯ ಸರ್ಕಾರಿ ಕೈಗಾರಿಕೆ ತರಬೇತಿ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕರಿಗೆ ಸಂಭಾವನೆ ನೀಡುತ್ತಿಲ್ಲ. ಆದರೆ, ಆಡಳಿತಾಧಿಕಾರಿ ಎಂ.ಎಲ್. ಹೊಸಮನಿ ಹಾಗೂ ಪ್ರಾಚಾರ್ಯ ಆರ್.ಡಿ. ಮೊಕಾಶಿ ಖಜಾನೆಯಿಂದ ತೆಗೆದ ಹಣವನ್ನು ದುರ್ಬಳಕೆ ಮಾಡುತ್ತಿದ್ದಾರೆ. ಅವರ ಮೇಲೆ ಕ್ರಮ ಜರುಗಿಸುವಂತೆ ಹಾಗೂ ಅತಿಥಿ ಉಪನ್ಯಾಸಕರ ಜೀವನೋಪಾಯಕ್ಕೆ ಅನುವು ಮಾಡಿಕೊಡುವಂತೆ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದ ಅತಿಥಿ ಉಪನ್ಯಾಸಕರು ತಹಸೀಲ್ದಾರ್ ಎ.ಎ.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಮನವಿ ಸಲ್ಲಿಕೆಯ ನೇತೃತ್ವ ವಹಿಸಿದ್ದ ಎಬಿವಿಪಿ ತಾಲೂಕಾಧ್ಯಕ್ಷ ಸಿ.ಸಿ. ತಾವರಿಮಠ ಮಾತನಾಡಿ, ಈ ಕುರಿತಂತೆ ಹಲವಾರು ಬಾರಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದಾಗ್ಯೂ ಅವರೂ ಸ್ಪಂದಿಸುತ್ತಿಲ್ಲ.
ಕೂಡಲೇ ತಹಸೀಲ್ದಾರರು ತಮ್ಮ ಮೂಲಕವೇ ಅತಿಥಿ ಉಪನ್ಯಾಸಕರ ಪೂರ್ಣ ಗೌರವ ಧನ ದೊರಕಿಸಿಕೊಡಬೇಕು. ಇಲ್ಲದೇ ಹೋದಲ್ಲಿ ಪಟ್ಟಣದ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರು, ಸಾರ್ವಜನಿಕರು ಹಾಗೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement