ಆಯೋಗದ ಕಣ್ಣಿಗೆ ಬೀಳದ ಫಲಕಗಳು!
ಬ್ಯಾಡಗಿ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾ. 3ರಿಂದಲೇ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪಟ್ಟಣದ ವಿವಿಧೆಡೆ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ಭಾವಚಿತ್ರಗಳಿರುವ ಫಲಕಗಳು ರಾರಾಜಿಸುತ್ತಿವೆ.
ಮಾಧ್ಯಮಗಳಿಂದ ಹಿಡಿದು ಅಭ್ಯರ್ಥಿಗಳ ಎಲ್ಲ ನಡೆಗಳ ಮೇಲೂ ಹದ್ದಿನ ಕಣ್ಣಿಟ್ಟಿರುವ ಚುನಾವಣಾ ಆಯೋಗ
ಬಹಳಷ್ಟು ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಹೇಳುತ್ತಿದೆ. ಆದರೆ ಪಟ್ಟಣದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್ಗಳು, ಫಲಕಗಳು ಅದರ ಕಣ್ಣಿಗೆ ಕಾಣಿಸುತ್ತಿಲ್ಲವೇಕೆ ಎಂಬುದು ಸಾರ್ವಜನಿಕರ ಪ್ರಶ್ನೆ.
ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಕೃಷಿ ಹಾಗೂ ಮಾರುಕಟ್ಟೆಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿರುವ ಬೃಹದಾಕಾರದ ಜಾಹೀರಾತು ಫಲಕದಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕೃಷಿ ಮಾರುಕಟ್ಟೆ ಸಚಿವ ಎಸ್.ಕೆ. ಬೆಳ್ಳುಬ್ಬಿ ಹಾಗೂ ಮಾಜಿ ಸಚಿವ ಸಿ.ಎಂ. ಉದಾಸಿಯವರ ಭಾವಚಿತ್ರಗಳಿವೆ.
ತಾಲೂಕಿನ ಬಿಸಲಹಳ್ಳಿ ಗ್ರಾಮದ ಶಾಲೆ ಪಕ್ಕದಲ್ಲಿ ಅಟಲ್ಜೀ ಜನಸ್ನೇಹಿ ಕೇಂದ್ರದ ಉದ್ಘಾಟನೆ ನಾಮಫಲಕದಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಮಾಜಿ ಪ್ರಧಾನಿ ವಾಜಪೇಯಿ ಹಾಗೂ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಫೋಟೋಗಳು ರಾರಾಜಿಸುತ್ತಿದೆ.