ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಡಿಸಿ ಅಧಿಕಾರ ಸ್ವೀಕಾರ

Rashmi Kasaragodu
Updated On : 29 Mar 2013, 12:45 pm

ಕನ್ನಡಪ್ರಭ ವಾರ್ತೆ, ಹಾವೇರಿ, ಮಾ. 28
ಹಾವೇರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿ. ಅನ್ಬುಕುಮಾರ ಗುರುವಾರ ಬೆಳಗ್ಗೆ ಅಧಿಕಾರ ವಹಿಸಿಕೊಂಡರು.
ಇದಕ್ಕೂ ಮುಂಚೆ ಅನ್ಬುಕುಮಾರ ಬೆಂಗಳೂರಿನಲ್ಲಿ ಮೈಸೂರು ಮಿನರಲ್ಸ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. 2004ರಲ್ಲಿ ಐಎಎಸ್ ಸೇವೆಗೆ ಸೇರ್ಪಡೆಯಾಗಿದ್ದು, ಬಳ್ಳಾರಿಯಲ್ಲಿ ಉಪ ವಿಭಾಗಾಧಿಕಾರಿಯಾಗಿ, ಶಿವಮೊಗ್ಗ ಮತ್ತು ಗುಲ್ಬರ್ಗದಲ್ಲಿ ಜಿಪಂ ಸಿಇಓ ಆಗಿ, ರಾಯಚೂರು ಮತ್ತು ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮೂಲತಃ ತಮಿಳುನಾಡಿನವರಾದ ಅನ್ಬುಕುಮಾರ ಇತಿಹಾಸದಲ್ಲಿ ಸ್ನಾತಕೋತ್ತರ ಪದವೀಧರರು.
ಅಧಿಕಾರಿಗಳ ಸಭೆ: ಅಧಿಕಾರ ವಹಿಸಿಕೊಂಡ ಕೂಡಲೇ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿ ಜಿ. ಜಗದೀಶ, ಜಿಪಂ ಸಿಇಓ ಉಮೇಶ ಕುಸುಗಲ್ಲ, ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ಉಪ ಚುನಾವಣಾಧಿಕಾರಿಗಳು ಹಾಗೂ ಚುನಾವಣಾ ಶಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯೊಂದಿಗೆ ತುರ್ತುಸಭೆ ನಡೆಸಿ, ಚುನಾವಣಾ ಪೂರ್ವಸಿದ್ಧತೆ ಕಾರ್ಯಗಳನ್ನು ಪರಿಶೀಲಿಸಿದರು.
ಚುನಾವಣಾ ಕಾರ್ಯಕ್ಕೆ ಅಧಿಕಾರಿ ಹಾಗೂ ಸಿಬ್ಬಂದಿ ನಿಯೋಜನೆ ಮಾಡುವಾಗ ಎಲ್ಲ ಹಂತಗಳಲ್ಲಿ ಹೆಚ್ಚುವರಿ ಅಧಿಕಾರಿ ಹಾಗೂ ಸಿಬ್ಬಂದಿ ನಿಯೋಜಿಸುವಂತೆ ಹಾಗೂ ವಿವಿಧ ಹಂತದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಹೆಚ್ಚಿನ ಹೊಣೆಗಾರಿಕೆ ವಹಿಸಿ ಚುನಾವಣಾ ಕಾರ್ಯ ಸುಗಮವಾಗುವಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement