ಅಧಿಕ ಮತ ಅಂತರದಿಂದ ಗೆಲ್ಲುವೆ: ಬೊಮ್ಮಾಯಿ
ಹಾವೇರಿ: 2008ರ ಸಾರ್ವತ್ರಿಕ ಚುನಾವಣೆಗಿಂತ ಹೆಚ್ಚಿನ ಮತಗಳಿಂದ ಈ ಬಾರಿ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ, ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿವಿಧ ಮತ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, 'ನನ್ನನ್ನು ಪ್ರಸಕ್ತ ಚುನಾವಣೆಯಲ್ಲಿ ಪರಾಭವಗೊಳಿಸಬೇಕೆಂದು ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಕೆಜೆಪಿ ಉದ್ದೇಶ ಈಡೇರುವುದಿಲ್ಲ. ಕ್ಷೇತ್ರದಾದ್ಯಂತ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಕಣ್ಣಾರೆ ಕಂಡಿರುವ ಮತದಾರರು ನನ್ನ ಗೆಲವಿಗೆ ಟೊಂಕ ಕಟ್ಟಿ ನಿಂತಿದ್ದಾರೆ ಅವರ ಲೆಕ್ಕಾಚಾರ ಮೇ 8ರಂದು ಪ್ರಕಟಗೊಳ್ಳುವ ಫಲಿತಾಂಶದಿಂದ ತಲೆ ಕೆಳಗಾಗಲಿದೆ. ಶಿಗ್ಗಾಂವಿ ಮಾತ್ರವಲ್ಲದೆ ಹಾವೇರಿ ಜಿಲ್ಲೆಯ ಎಲ್ಲ ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ' ಎಂದರು.