ಈ ಬಾರಿ ಗೆಲವು ನನ್ನದೇ: ತಹಸೀಲ್ದಾರ್
ಹಾನಗಲ್ಲ: ಈ ಬಾರಿ ಗೆಲವು ನನ್ನದೇ... ಕಾಂಗ್ರೆಸ್ ಪಕ್ಷದತ್ತ ಪ್ರಸಕ್ತ ಚುನಾವಣೆಯಲ್ಲಿ ಮತದಾರನ ಚಿತ್ತವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ಖಚಿತ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರೂ ಆಗಿರುವ ವಿಧಾನಸಭೆ ಮಾಜಿ ಉಪ ಸಭಾಪತಿ ಮನೋಹರ ತಹಸೀಲ್ದಾರ್ ತಿಳಿಸಿದರು.
ಹಾನಗಲ್ಲಿನ ಶಾಸಕರ ಮಾದರಿ ಶಾಲೆಯ ಮತದಾನ ಕೇಂದ್ರದಲ್ಲಿ 9ನೇ ಚುನಾವಣೆ ಎದುರಿಸುತ್ತಿರುವ ತಹಸೀಲ್ದಾರ್ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ತಮ್ಮ ಗೆಲುವಿಗೆ ಹಾನಗಲ್ಲ ಮತಕ್ಷೇತ್ರದ ಮತದಾರರು ಉತ್ಸಾಹದಿಂದ ಮತದಾನ ಮಾಡಲಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಈ ಬಾರಿ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ. ಕಾಂಗ್ರೆಸ್ ಪಕ್ಷ ಮಾತ್ರ ಸಾಮಾಜಿಕ ನ್ಯಾಯ ಒದಗಿಸಬಲ್ಲದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದರು.