ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಶಾಂತ ಮತದಾನ: ಜನರಿಗೆ ಡಿಸಿ ಕೃತಜ್ಞತೆ

Vishwanath S
Updated On : 6 May 2013, 10:46 am

ಕನ್ನಡಪ್ರಭ ವಾರ್ತೆ, ಹಾವೇರಿ, ಮೇ 5
ಹಾವೇರಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಭಾನುವಾರ ಶಾಂತ ಹಾಗೂ ವ್ಯವಸ್ಥಿತ ಮತದಾನ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮತದಾನಕ್ಕೆ ಮತದಾರರ ಉತ್ತಮ ಸ್ಪಂದನೆ ವ್ಯಕ್ತವಾದುದಕ್ಕೆ ಜಿಲ್ಲಾ ಚುನವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ವಿ.ಅನ್ಬುಕುಮಾರ ಸಂತಸ ವ್ಯಕ್ತಪಡಿಸಿದ್ದಾರೆ.
ಮತದಾನ ಪ್ರಕ್ರಿಯೆಯಲ್ಲಿ ಶಾಂತಿ ಹಾಗೂ ಶಿಸ್ತಿನಿಂದ ಪಾಲ್ಗೊಂಡ ಮತದಾರರು, ಚುನಾವಣಾ ಕಾರ್ಯದಲ್ಲಿ ಭಾಗಿಯಾದ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿ, ಮತದಾನ ಪ್ರಮಾಣ ಹೆಚ್ಚಳಕ್ಕೆ ಶ್ರಮಿಸಿದ ಮತದಾರ ವ್ಯವಸ್ಥಿತ ಶಿಕ್ಷಣ ಮತ್ತು
ಭಾಗವಹಿಸುವಿಕೆ ಜಿಲ್ಲಾ ಸಮಿತಿ (ಸ್ವೀಪ್) ಹಾಗೂ ಜಾಗೃತಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಮತದಾನದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಶ್ರಮಿಸಿದ ಮಾಧ್ಯಮ ಪ್ರತಿನಿಧಿಗಳಿಗೆ ಅವರು ಕೃಜ್ಞತೆ ಸಲ್ಲಿಸಿದ್ದಾರೆ.
ಪೊಲೀಸ್ ಅಧೀಕ್ಷಕರ ಕೃತಜ್ಞತೆ:
ಜಿಲ್ಲೆಯಲ್ಲಿ ಚುನಾವಣೆ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಪಾಲನೆಗೆ ನೆರವಾದ ಸಾರ್ವಜನಿಕರು ಹಾಗೂ ರಕ್ಷಣಾ ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಚೇತನಸಿಂಗ್ ರಾಠೋಡ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಶಾಂತಿ ಹಾಗೂ ಕಾನೂನು ಪಾಲನೆಯಲ್ಲಿ ನೆರವಾದ ಮಹಾರಾಷ್ಟ್ರ ರಾಜ್ಯದಿಂದ ಬಂದ ಹೋಮ್ ಗಾಡ್ಸ್ ಮತ್ತು ಪ್ಯಾರಾಮಿಲಿಟರಿ ಪಡೆ ಮತ್ತು ರಾಜ್ಯದ ಪೊಲೀಸ್ ಹಾಗೂ ಜಿಲ್ಲಾ ಗೃಹರಕ್ಷ ದಳದ ಸಿಬ್ಬಂದಿಯ ಸೇವೆಯನ್ನು ಸ್ಮರಿಸಿರುವ ಅವರು, ಶಾಂತ ಮತದಾನಕ್ಕೆ ಸಹಕರಿಸಿದ ಜಿಲ್ಲೆಯ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement