ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಹ್ಯಾಟ್ರಿಕ್ ಗೆಲವು ಖಚಿತ: ಪಾಟೀಲ್

Vishwanath S
Updated On : 6 May 2013, 10:47 am

ಹಿರೇಕೆರೂರು: ವಿಧಾನಸಭಾ ಚುನಾವಣೆಗೆ ತಾಲೂಕಿನ ಬಾಳಂಬೀಡ ಗ್ರಾಮದ ಮತಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಬಿ.ಸಿ. ಪಾಟೀಲ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನತೆ ಭಾರೀ ಪ್ರಮಾಣದಲ್ಲಿ ಒಲವು ತೋರಿದ್ದು, ಈ ಭಾರಿ ನಾನು ಹ್ಯಾಟ್ರಿಕ್ ಗೆಲವು ಸಾಧಿಸಲಿದ್ದೇನೆ. ಶಾಸಕನಾಗಿ ನಾನು ತಾಲೂಕಿನಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲುವಿಗೆ ಸಹಕಾರಿಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕುಟುಂಬ ಸದಸ್ಯರಾದ ವನಜಾ ಪಾಟೀಲ, ಸೌಮ್ಯಾ ಪಾಟೀಲ, ಸೃಷ್ಟಿ ಪಾಟೀಲ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement