ಇಂದು ವಿಶ್ವ ರೆಡ್ಕ್ರಾಸ್ ದಿನಾಚರಣೆ
ಹಾವೇರಿ: ವಿಶ್ವ ರೆಡ್ಕ್ರಾಸ್ ಸಂಸ್ಥೆಯ ದಿನಾಚರಣೆ ಕಾರ್ಯಕ್ರಮ ಮೇ 8ರಂದು ಸಂಜೆ 4 ಗಂಟೆಗೆ ನಗರದ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ಜರುಗಲಿದೆ. ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಚೇರಮನ್ ಡಾ. ಎಸ್.ಪಿ. ಶಂಕ್ರಪ್ಪನವರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ನಿರ್ವಹಣಾ ಸಮಿತಿ ಸದಸ್ಯ ಎಂ.ಎಸ್. ಕೋರಿಶೆಟ್ಟರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ರೆಡ್ಕ್ರಾಸ್ ಸಂಸ್ಥೆಯ ಎಲ್ಲ ಸದಸ್ಯರು ಹಾಗೂ ನಿರ್ವಹಣಾ ಸಮಿತಿ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಂ.ಸಿ. ಕೊಳ್ಳಿಯವರ ವಿನಂತಿಸಿದ್ದಾರೆ.