ಮತದಾರರ ಋಣ ತೀರಿಸುವ ಯತ್ನ
ಶೇ. 50ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದು ಖುಷಿ ತಂದಿದೆ. ಕ್ಷೇತ್ರದ ಮತದಾರರು ಕಾಂಗ್ರೆಸ್ ಕೈಬಿಡುವುದಿಲ್ಲ ಎಂಬ ನಂಬಿಕೆಯಿತ್ತು. ಕ್ಷೇತ್ರದ ಮತದಾರರ ಋಣ ತೀರಿಸುವ ಪ್ರಯತ್ನ ಮಾಡುತ್ತೇನೆ ಎಂದು ಹಾವೇರಿ ಕ್ಷೇತ್ರದಿಂದ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿ ರುದ್ರಪ್ಪ ಲಮಾಣಿ ಹೇಳಿದರು. ಗೆಲುವಿನ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಭದ್ರ ಹಾಗೂ ಜನಪರ ಆಡಳಿತ ನೀಡಲಿದೆ ಎಂಬ ವಿಶ್ವಾಸದಿಂದ ಈ ಬಾರಿ ಜನ ಆಶೀರ್ವಾದ ಮಾಡಿದ್ದಾರೆ. ಜಿಲ್ಲೆಯಲ್ಲಿ 5 ವರ್ಷಗಳಲ್ಲಿ ನಡೆದ ಎಲ್ಲ ಕಹಿ ಘಟನೆಗಳು ಹಾಗೂ ದುರಾಡಳಿತಕ್ಕೆ ತೆರೆ ಎಳೆದಿದ್ದು, ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸದೊಂದಿಗೆ ಸ್ವಚ್ಛ ಹಾಗೂ ಸುಭದ್ರ ಆಡಳಿತ ನೀಡಲಿದೆ ಎಂದರು.
- ರುದ್ರಪ್ಪ ಲಮಾಣಿ
ಹಾವೇರಿಯಲ್ಲಿ ಗೆದ್ದ ಅಭ್ಯರ್ಥಿ (ಕಾಂಗ್ರೆಸ್)