ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ವಿಜಯೋತ್ಸವಕ್ಕೆ ಅಡ್ಡಿ: ಕಲ್ಲು ತೂರಾಟ, ಗಾಯ

Lingaraj Badiger
Updated On : 9 May 2013, 12:02 pm

ಹಿರೇಕೆರೂರು:  ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯ ಮನೆಯ ಎದುರು ಮೆರವಣಿಗೆ ನಡೆಸಲು ಯತ್ನಿಸಿದ ಕೆಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದರಿಂದ ರೊಚ್ಚಿಗೆದ್ದ ಕೆಲ ಕಿಡಿಗೆಡಿಗಳು ಪೊಲೀಸರ ಮೇಲೆ ಕಲ್ಲು ತೂರಿದ ಪರಿಣಾಮ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ, 8 ಸುತ್ತು ಅಶ್ರುವಾಯು ಸಿಡಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಕೆಜೆಪಿ ಅಭ್ಯರ್ಥಿ ಯು.ಬಿ. ಬಣಕಾರ ಗೆಲವು ಸಾಧಿಸಿದ ನಂತರ ಪಟ್ಟಣದ ಅಲ್ಲಲ್ಲಿ ಕೆಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ಕೆಜೆಪಿ ಬಾವುಟಗಳೊಂದಿಗೆ ಕೆಲವರು ಕಾಂಗ್ರೆಸ್ ಅಭ್ಯರ್ಥಿ ಬಿ.ಸಿ. ಪಾಟೀಲ ಅವರ ಮನೆ ಮುಂದೆ ಬುಧವಾರ ಸಂಜೆ ಮೆರವಣಿಗೆ ಮಾಡಲು ಯತ್ನಿಸಿದಾಗ ಪೊಲೀಸರು ತಡೆದಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಲಾಠಿಚಾರ್ಜ್ ಮಾಡಿ ಅಶ್ರುವಾಯು ಸಿಡಿಸಿದರು. ಈ ಬಗ್ಗೆ ಸಿಪಿಐ ವಿಜಯ್ ಮರಗುಂಡಿ ಮಾತನಾಡಿ, ಕೆಜೆಪಿ ಕಾರ್ಯಕರ್ತರು ಬಿ.ಸಿ. ಪಾಟೀಲರ ಮನೆ ಮುಂದೆ ಮೆರವಣಿಗೆ ಮಾಡಲು ಯತ್ನಿಸಿದರು. ಇದನ್ನು ತಡೆದಿದ್ದರಿಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಇದರಿಂದ 5 ಪೊಲೀಸರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪೊಲೀಸ ವಾಹನ ಜಖಂಗೊಂಡಿದೆ. ಪ್ರತಿಯಾಗಿ ಲಘು ಲಾಠಿ ಪ್ರಹಾರ ಮಾಡಲಾಯಿತು.

ಬಿಜೆಪಿ ದುರಾಡಳಿ 'ಕೈ' ಗೆಲವಿಗೆ ಸಹಕಾರಿ
ಹಾವೇರಿ: ರಾಜ್ಯದಲ್ಲಿ ಬಿಜೆಪಿ ನಡೆಸಿದ ದುರಾಡಳಿತದ ವೈಫಲ್ಯಗಳೇ ಕಾಂಗ್ರೆಸ್ ಗೆಲ್ಲಲು ಸಹಕಾರಿಯಾಗಿದೆ. ಕ್ಷೇತ್ರದ ಮತದಾರರು ಕಾಂಗ್ರೆಸ್ ಮೇಲಿಟ್ಟಿರುವ ವಿಶ್ವಾಸಕ್ಕೆ ನಾನೆಂದಿಗೂ ಚಿರಋಣಿಯಾಗಿದ್ದೇನೆ ಎಂದು ಬಸವರಾಜ ಶಿವಣ್ಣನವರ ಹೇಳಿದರು. ಚುನಾವಣೆ ಪೂರ್ವದಲ್ಲಿ ಕ್ಷೇತ್ರದ ಮತದಾರರಿಗೆ ನೀಡಿದ ಎಲ್ಲ ಆಶ್ವಾಸನೆಗಳನ್ನು ಈಡೇರಿಸಲು ಬದ್ಧನಾಗಿದ್ದೇನೆ. ಜನರ ಪ್ರೀತಿ, ವಿಶ್ವಾಸ ಗಳಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ದುಡಿಯುತ್ತೇನೆ ಎಂದರು. ಈ ಗೆಲವಿನಿಂದ ಮನಸ್ಸಿಗೆ ತುಂಬಾ ಸಂತೋಷವಾಗಿದೆ. ಕಳೆದ ಚುನಾವಣೆಯಲ್ಲಿ ಸೋತ ಬಳಿಕ 5 ವರ್ಷಗಳವರೆಗೆ ಕ್ಷೇತ್ರದ ಮತದಾರರ ಬೇಕು- ಬೇಡಗಳಿಗೆ ಸ್ಪಂದಿಸಿದ್ದೇನೆ. ಅದೇ ಇಂದು ಪ್ರತಿಫಲ ನೀಡಿದಂತಾಗಿದೆ. ಬಡವರು, ಕೂಲಿಕಾರ್ಮಿಕರು, ರೈತರು ಸೇರಿದಂತೆ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ನೀಡಲಿದೆ. 50 ವರ್ಷಗಳಿಂದ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ಕಾಂಗ್ರೆಸ್ ಜನರಿಗೆ ಸುಭದ್ರ ಸರ್ಕಾರ ನೀಡಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement