ಪುರಸ್ಕಾರ ನೀಡಲು ನಿರ್ಧಾರ
ಬ್ಯಾಡಗಿ: ಎಸ್ಸೆಸ್ಸೆಲ್ಸಿ, ದ್ವಿತೀಯ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವೀರಶೈವ ಪಂಚಮಸಾಲಿ ಸಮಾಜಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ತಾಲೂಕು ಘಟಕ ನಿರ್ಧರಿಸಿದೆ. ತಾಲೂಕು ವ್ಯಾಪ್ತಿಯ ಪಂಚಮಸಾಲಿ ಸಮಾಜಕ್ಕೆ ಸೇರಿದ ಪ್ರತಿಭೆಗಳು ಎಸ್ಸೆಸ್ಸೆಲ್ಸಿ, ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮೂರು ಝರಾಕ್ಸ್ ಪ್ರತಿ ಹಾಗೂ ಭಾವಚಿತ್ರದೊಂದಿಗೆ ಅಧ್ಯಕ್ಷರು ತಾಲೂಕು ಪಂಚಮಸಾಲಿ ಸಮಾಜ. ಪಾರ್ವತಿ ಬೇಕರಿ ಮುಖ್ಯ ರಸ್ತೆ ಬ್ಯಾಡಗಿ ಇವರ ಹೆಸರಿಗೆ ಮೇ 20ರೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.